ಸಹಕಾರಿ ಸಕ್ಕರೆ ಕಾರ್ಖಾನೆಗೆ ಸಾಗಿಸಬೇಕಿದ್ದ ಕಬ್ಬನ್ನು ಕೆಲವು ಖಾಸಗಿಯವರು ಬೇರೆಡೆ ಕೊಂಡೊಯ್ಯುತ್ತಿರುವುದಕ್ಕೆ ಬ್ರೇಕ್ ಹಾಕಬೇಕು.
ಹೀಗಂತ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಶ್ರೀರಂಗಪಟ್ಟಣ, ಕೆ.ಆರ್.ಪೇಟೆ ಹಾಗೂ ಪಾಂಡವಪುರ ವ್ಯಾಪ್ತಿಯಲ್ಲಿ ಬೆಳೆಯಲಾದ ಕಬ್ಬನ್ನು ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆಗೆ ಜಿಲ್ಲಾಡಳಿತ ಗೊತ್ತು ಮಾಡಿದೆ.
ಆದರೆ ಬೇರೆಯವರು ಬಂದು ಇಲ್ಲಿನ ಕಬ್ಬನ್ನು ತೆಗೆದುಕೊಂಡು ಹೋಗುತ್ತಿದ್ದು, ಅದಕ್ಕೆ ತಡೆ ಹಾಕಬೇಕು. ಆಗಸ್ಟ್ 11 ರಿಂದ ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ ಕಬ್ಬು ಅರೆಯುವುದಕ್ಕೆ ಸಿದ್ಧವಾಗಲಿದೆ ಎಂದಿದ್ದಾರೆ.