Muttappa Rai Son:ಗುಂಡೇಟಿನಿಂದ ಗಾಯಗೊಂಡಿರುವ ರಿಕ್ಕಿ ರೈ ಆರೋಗ್ಯ ವಿಚಾರಿಸಿದ ಡಿಸಿಎಂ ಶಿವಕುಮಾರ್‌

Sampriya

ಬುಧವಾರ, 23 ಏಪ್ರಿಲ್ 2025 (14:58 IST)
ಬೆಂಗಳೂರು: ಕೆಲ ದಿನಗಳ ಹಿಂದೆ ಗುಂಡೇಟು ದಾಳಿಗೆ ಗಾಯಗೊಂಡು ಆಸ್ಪತ್ರೆ ಸೇರಿರುವ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಆರೋಗ್ಯವನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಚಾರಿಸಿದ್ದಾರೆ.

ಗುಂಡೇಟಿನಿಂದ ಗಾಯಗೊಂಡಿರುವ ರಿಕ್ಕಿ ಅವರು ಸದ್ಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡುವ ಮೊದಲೇ ರಿಕ್ಕಿ ರೈಗೆ ಕರೆ ಮಾಡಿ ಈ ಘಟನೆ ಹೇಗೆ ನಡೆಯಿತು ಎಂದು ಮಾಹಿತಿ ಪಡೆದುಕೊಂಡಿದ್ದಾರೆ.

ನಾನು ಗೃಹ ಇಲಾಖೆ ಜೊತೆಗೆ ಪ್ರಕರಣದ ಬಗ್ಗೆ ಮಾತನಾಡುತ್ತೇನೆ. ಪೊಲೀಸರು ಆರೋಪಿಗಳನ್ನ ಪತ್ತೆ ಮಾಡುತ್ತಾರೆ. ನೀನು ಆರೋಗ್ಯದ ಕಡೆ ಗಮನ ಕೊಡು ಎಂದು ಡಿಕೆಶಿ ಪೋನ್ ಮೂಲಕ ಸಾಂತ್ವನ ಹೇಳಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಶನಿವಾರ ಸಂಜೆ ಡಿಕೆಶಿ ರಿಕ್ಕಿ ರೈ ಜೊತೆ ಮಾತನಾಡಿ ಆರೋಗ್ಯ ವಿಚಾರಿಸಿದ್ದಾರೆ. ಇತ್ತ ಪೊಲೀಸರ ತನಿಖೆ ನಡುವೆ ಡಿಸಿಎಂ ಆರೋಗ್ಯ ವಿಚಾರಿಸಿರುವುದು ಆತ್ಮಬಲ ಹೆಚ್ಚಿಸಿದೆ ಎಂದು ರಿಕ್ಕಿ ರೈ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ