ನನ್ನ ನಗರ ನನ್ನ ಬಜೆಟ್ ಅಭಿಯಾನ

ಬುಧವಾರ, 23 ಫೆಬ್ರವರಿ 2022 (15:37 IST)
ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಸಹಯೋಗದೊಂದಿಗೆ ಜನಾಗ್ರಹ ಪ್ರತಿಷ್ಠಾನವು ವಾರ್ಷಿಕ ನಗರ ಬಜೆಟ್ಗಾಗಿ ಸಾರ್ವಜನಿಕರಿಂದ ಸಲಹೆಗಳನ್ನು ಸಂಗ್ರಹಿಸಲಿದೆ.

ಈ ಬಾರಿ ವಿಶೇಷವಾಗಿ ಉದ್ಯಾನವನ, ಪಾದಚಾರಿ ಮಾರ್ಗ ಹಾಗೂ ಸಾರ್ವಜನಿಕ ಶೌಚಾಲಯಗಳ ಬಗ್ಗೆ ನಾಗರಿಕರ ಪ್ರತಿಕ್ರಿಯೆ ಪಡೆಯುವ ಅಭಿಯಾನಕ್ಕೆ ಮುಖ್ಯ ಆಯುಕ್ತರಾದ ಗೌರವ್ ಗುಪ್ತ ಚಾಲನೆ ನೀಡಿದರು.

ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮುಖ್ಯ ಆಯುಕ್ತರಾದ ಗೌರವ್ ಗುಪ್ತ ಅವರು ಮಾತನಾಡಿದ್ದು, ಜನಾಗ್ರಹ ಪ್ರತಿಷ್ಠಾನದ ಮೂಲಕ ‘ನನ್ನ ನಗರ ನನ್ನ ಬಜೆಟ್’ ಎಂಬ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ.

2015 ರಿಂದಲೂ ಅಭಿಯಾನವನ್ನು ನಡೆಸಿಕೊಂಡು ಬರುತ್ತಿದ್ದು, ಆ ಮೂಲಕ ನಗರದ ಬಜೆಟ್ನಲ್ಲಿ ಜನರು ಭಾಗವಹಿಸುವಂತೆ ಮಾಡುವುದು ಇದರ ಉದ್ದೇಶವಾಗಿದೆ ಎಂದು ತಿಳಿಸಿದರು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ