ಮಾಧ್ಯಮಗಳ ಸ್ವಾತಂತ್ರ್ಯಕ್ಕೆ ನನ್ನ ಸರ್ಕಾರ ಸದಾ ಬದ್ಧ- ಸಿಎಂ ಯಡಿಯೂರಪ್ಪ ಟ್ವೀಟ್
ಗುರುವಾರ, 10 ಅಕ್ಟೋಬರ್ 2019 (11:12 IST)
ಬೆಂಗಳೂರು : ಮಾಧ್ಯಮಗಳ ಸ್ವಾತಂತ್ರ್ಯಕ್ಕೆ ನನ್ನ ಸರ್ಕಾರ ಸದಾ ಬದ್ಧ ಎಂದು ಟ್ವೀಟರ್ ನಲ್ಲಿ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಅಧಿವೇಶನಕ್ಕೆ ಸುದ್ದಿ ಮಾಧ್ಯಮಗಳ ಕ್ಯಾಮರಾಗಳಿಗೆ ನಿರ್ಬಂಧ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ನಿರ್ಧಾರವನ್ನು ಪುನರ್ ಪರಿಶೀಲಿಸಲು ವಿನಂತಿಸುತ್ತೇನೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವಿನಂತಿ ಮಾಡುತ್ತೇನೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಅಧಿವೇಶನದಲ್ಲಿ ಸುದ್ದಿ ಮಾಧ್ಯಮಗಳ ಕ್ಯಾಮರಾಗಳಿಗೆ ನಿರ್ಬಂಧ ವಿಚಾರದ ಬಗ್ಗೆ ಪ್ರತಿಪಕ್ಷಗಳು ಭಾರಿ ವಿರೋಧ ವ್ಯಕ್ತಪಡಿಸುತ್ತಿದ್ದು, ಮಾಧ್ಯಮಗಳ ಸ್ವಾತಂತ್ರ್ಯವನ್ನು ಸರ್ಕಾರ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸುತ್ತಿದ್ದಾರೆ.