ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುತ್ತದೆ. ಕಾವೇರಿ ವಿಚಾರದಲ್ಲಿ ತೆಗೆದುಕೊಂಡ ನಿಲುವನ್ನು ಮಹದಾಯಿ ವಿಚಾರದಲ್ಲಿ ತೆಗೆದುಕೊಳ್ಳಲಾಗುತ್ತದೆ. ಉತ್ತರ ಕರ್ನಾಟಕ, ಹಳೇ ಕರ್ನಾಟಕ ಎಂದು ಬೇಧ ಮಾಡುವುದಿಲ್ಲ ಎಂದು ಭರವಸೆ ನೀಡಿದರು.
ಮಹದಾಯಿ ಸರ್ವಪಕ್ಷ ಸಭೆ......
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿರುವ ಸರ್ವಪಕ್ಷ ಸಭೆಗೂ ಮುನ್ನ ಮಹದಾಯಿ ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆಯಲಿ ಎಂದು ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಸ್ಟೀಲ್ ಬ್ರಿಡ್ಜ್ಗೆ ವಿರೋಧ......
ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಕಡಿಮೆಗೊಳಿಸುವ ಉದ್ದೇಶದಿಂದ 1800 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸ್ಟೀಲ್ ಬ್ರಿಡ್ಜ್ ಯೋಜನೆಗೆ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದರು.