ಹೈಕಮಾಂಡ್ ಹೇಳಿದ ಹಾಗೇ ನನ್ನ ನಡೆ: ಸಿಎಂ ಸಿದ್ದರಾಮಯ್ಯ

Sampriya

ಸೋಮವಾರ, 1 ಜುಲೈ 2024 (20:03 IST)
ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಎದ್ದಿರುವ ಸಿಎಂ ಸ್ಥಾನ ಬದಲಾವಣೆ ಬಗ್ಗೆ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾಣಕ್ಕೆ ಬದ್ಧನಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕಳೆದ ವಾರ ಒಕ್ಕಲಿಗ ಮಠದ ಚಂದ್ರಶೇಖರ ಸ್ವಾಮೀಜಿ ಅವರು ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಸಿಎಂ ಖುರ್ಚಿಯನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡುವಂತೆ ಸಾರ್ವಜನಿಕವಾಗಿ ಮನವಿ ಮಾಡಿದ್ದರು. ಈ ಹೇಳಿಕೆ ಬಳಿಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಖುರ್ಚಿ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿದೆ.

ಈ ಬಗ್ಗೆ ಇಂದು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು  ಇದು ಸಾರ್ವಜನಿಕವಾಗಿ ಚರ್ಚಿಸಬೇಕಾದ ವಿಷಯವಲ್ಲ. ಸಿಎಂ ಸ್ಥಾನವನ್ನು ಬದಲಾಯಿಸುವ ಬಗ್ಗೆ ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ನಾನು ಬದ್ಧನಾಗಿರುತ್ತೇನೆ. ಇನ್ನೂ ಸ್ವಾಮೀಜಿ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದರು.

ಸಿದ್ದರಾಮಯ್ಯ ಆಪ್ತ ಸಚಿವರು ಹೆಚ್ಚಿನ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಿ ಲಿಂಗಾಯತ, ಎಸ್‌ಸಿ, ಎಸ್‌ಟಿ ಮತ್ತು ಅಲ್ಪಸಂಖ್ಯಾತ ಸಮುದಾಯದ ಮುಖಂಡರಿಗೆ ನೀಡಬೇಕೆಂಬ ಬೇಡಿಕೆ ಮುಂದಿಟ್ಟಿದ್ದಾರೆ. ಈ ಮೂಲಕ ಡಿಕೆ ಶಿವಕುಮಾರ್ ಅವರ ಅಧಿಕಾರವನ್ನು ಮೊಟಕುಗೊಳಿಸುವ ಪ್ರಯತ್ನವಾಗಿದೆ ಎಂಬುದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ