ಬೆಂಗಳೂರು: 50:50 ಅನುಪಾತದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಇದು ಬಿಜೆಪಿಯವರ ಕಾಲದಲ್ಲಿ ಆಗಿದ್ದು. 1 ಎಕರೆ 15ಗುಂಟೆ ಜಮೀನು ನನ್ನ ಹೆಂಡತಿ ಹೆಸರಿನಲ್ಲಿದೆ. ಮುಡಾದಲ್ಲಿ ನನ್ನ ಬಾಮೈದ ಜಮೀನು ಖರೀದಿಸಿ ಅರಿಶಿನ-ಕುಂಕುಮ ರೀತಿಯಲ್ಲಿ ನನ್ನ ಮಡದಿಗೆ ಉಡುಗೊರೆ ರೂಪದಲ್ಲಿ ನೀಡಿದ್ದಾರೆ ಎಂದು ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಕಾನೂನಿನ ಪ್ರಕಾರ 50:50 ಅನುಪಾತದಲ್ಲಿ ಜಮೀನು ಕೊಡುವುದಾಗಿ ಮುಡಾ ಹೇಳಿದೆ. ಆದರೆ ಮುಡಾದವರು ಜಮೀನನ್ನು ಸೈಟುಗಳನ್ನಾಗಿ ಮಾಡಿ ಹಂಚಿಬಿಟ್ಟರು. ಬಳಿಕ ಜಮೀನಿಲ್ಲದೇ ಹಾಗೇ ಕೊಡುವುದಾಗಿ ಹೇಳಿದರು. ಅದಕ್ಕೆ ಕಾನೂನಿನ ಪ್ರಕಾರ ಬೇರೆ ಕಡೆ ಜಮೀನು ಕೊಟ್ಟಿದ್ದಾರೆ. ಇದು ತಪ್ಪಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟುಗಳ ಹಂಚಿಕೆಯಲ್ಲಿ ಭಾರಿ ಅಕ್ರಮ ನಡೆದಿರುವ ಆರೋಪ ಕೇಳಿಬರುತ್ತಿದ್ದು, ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೆಸರು ಕೇಳಿಬಂದಿದೆ. ಇನ್ನೂ ಸಿದ್ದರಾಮಯ್ಯ ಅವರು ಪತ್ನಿ ಹೆಸರಿನಲ್ಲೂ ಜಮೀನು ಇದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.