ನಿಗೂಢ ಸ್ಪೋಟ: ಮೈಸೂರು ಕೋರ್ಟ್ ಆವರಣದಲ್ಲಿ ಬಿಗಿ ಭದ್ರತೆ

ಮಂಗಳವಾರ, 2 ಆಗಸ್ಟ್ 2016 (11:01 IST)
ಮೈಸೂರು ನ್ಯಾಯಾಲಯದ ಶೌಚಾಲಯದಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆವರಣದಲ್ಲಿ ಬಾಂಬ್ ನಿಷ್ಕ್ರಿಯ ದಳ ಹಾಗೂ ಸ್ಫೋಟಕ ವಸ್ತು ಪತ್ತೆ ದಳ ಪರಿಶೀಲನೆ ನಡೆಸುತ್ತಿದ್ದು, ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುತ್ತಿದೆ.
 
ಮೈಸೂರು ನ್ಯಾಯಾಲಯದ ಆವರಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಬಾಂಬ್ ನಿಷ್ಕ್ರಿಯ ದಳ, ಸ್ಫೋಟಕ ವಸ್ತು ಪತ್ತೆ ದಳ ಹಾಗೂ ಶ್ವಾನದಳ ಸ್ಥಳದಲ್ಲೇ ಮೊಕ್ಕಾಂ ಹೂಡಿದೆ. ಡಿಜಿಪಿ ನೀಲಮಣಿ ಹಾಗೂ ಆರ್‌.ರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಶೌಚಾಲಯ ಸ್ವಚ್ಚಗೊಳಿಸುವ ಸಿಬ್ಬಂದಿಯನ್ನು ತಪಾಸಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ.
 
ಮೈಸೂರು ಕೋರ್ಟ್‌‌ನಲ್ಲಿ ಕಕ್ಷಿದಾರರು ಬಳಸುವ ಶೌಚಾಲಯದಲ್ಲಿ ನಿನ್ನೆ ಸಂಜೆ ವೇಳೆ ಸ್ಫೋಟದ ಶಬ್ದ ಕೇಳಿಬಂದಿತ್ತು. ಇನ್ನೂ ಎರಡು ಅನುಮಾನಾಸ್ವದ ಪೊಟ್ಟಣಗಳು ಪತ್ತೆಯಾಗಿದ್ದು, ಸ್ಪೋಟಕ ಸಾಮಾಗ್ರಿಗಳಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ