ಮೈಸೂರಿನಲ್ಲಿ ಗುಂಡು ಹಾರಿಸಿ ಚಿನ್ನಾಭರಣ ದರೋಡೆ: ಯುವಕ ಬಲಿ
ಚಿನ್ನಾಭರಣದ ವ್ಯಾಪಾರಿ ಮೇಲೆ ಗುಂಡು ಹಾರಿಸಿ ನಾಲ್ವರು ದರೋಡೆಕೋರರು ಅಂಗಡಿ ದರೋಡೆ ಮಾಡಿದ ಆಘಾತಕಾರಿ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.
ಅಮೃತ್ ಗೋಲ್ಡ್ ಆ್ಯಂಡ್ ಸಿಲ್ವರ್ ಮಾಲೀಕ ಧರ್ಮೇಂದ್ರ ದರೋಡೆಕೋರರ ಮೇಲೆ ಗುಂಡು ಹಾರಿಸಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಚಂದ್ರ (23) ಗಾಯಗೊಂಡಿದ್ದಾನೆ.
ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ಸೋಮವಾರ ಈ ಘಟನೆ ನಡೆದಿದ್ದು, ಚಿನ್ನಾಭರಣ ವ್ಯಾಪಾರಿ ಧರ್ಮೇಂದ್ರ ಎಂಬವರಿಗೆ ಕೂಡ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯಾರಣ್ಯಪುರಂನ ಮುಖ್ಯರಸ್ತೆಯಲ್ಲಿರುವ ಅಂಗಡಿಗೆ ಮುಗ್ಗಿದ ಮೂವರು ದರೋಡೆಕೋರರು ಚಿನ್ನ, ಬೆಳ್ಳಿ ಕದಿಯಲು ಯತ್ನಿಸಿದ್ದಾರೆ. ಇದನ್ನು ತಡೆಯಲು ಯತ್ನಿಸಿದ ಮಾಲೀಕನ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ಹೇಳಲಾಗಿದೆ.