ಮೈಸೂರು ದಸರಾ: ಮತ್ತೊಂದು ಸ್ಪೇಷಲ್ ಏನ್ ಗೊತ್ತಾ?

ಸೋಮವಾರ, 1 ಅಕ್ಟೋಬರ್ 2018 (17:45 IST)
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ವಿಭಿನ್ನವಾಗಿ ಪ್ರಯತ್ನಗಳು ನಡೆಯುತ್ತಿವೆ. ಪ್ರವಾಸಿಗರನ್ನು ಆಕರ್ಷಿಸಲು ಪ್ರವಾಸೋದ್ಯಮ ಇಲಾಖೆಯಿಂದ ವಿನೂತನ ಪ್ರಯತ್ನಗಳು ಮುಂದುವರಿದಿವೆ.

ಮೈಸೂರು ದಸರಾ ನೋಡಲು ಲಕ್ಷಾಂತರ ಜನರು ಸಾಕ್ಷಿಯಾಗಲಿದ್ದಾರೆ. ಪ್ರವಾಸಿಗರನ್ನು ಆಕರ್ಷಣೆ ಮಾಡಲು ದಸರಾದಲ್ಲಿ ವಿಂಟೇಜ್ ಕಾರ್ ಗಳ ಪ್ರದರ್ಶನ ಆಯೋಜಿಸಲಾಗಿದೆ.

ನೂರಾರು ವರ್ಷಗಳ ಹಳೆಯ ಕಾರುಗಳ ಪ್ರದರ್ಶನ ನಡೆಯಲಿದೆ. ನಗರದ ಲಲಿತ್ ಮಹಲ್ ಹೋಟೆಲ್ ಬಳಿ ವಿಂಟೇಜ್ ಕಾರ್ ಫೆಸ್ಟಿವಲ್ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಸಚಿವ ಜಿ.ಟಿ. ದೇವೇಗೌಡ ಚಾಲನೆ ನೀಡಿದರು.

ಸುಮಾರು 50ಕ್ಕೂ ಹೆಚ್ಚು ವಿವಿಧ ಬಗೆಯ ಕಾರುಗಳು ಭಾಗಿಯಾಗಿದ್ದವು. ಫ್ರಾನ್ಸ್, ಶ್ರೀಲಂಕಾ, ಇಂಗ್ಲೆಂಡ್ ಸೇರಿದಂತೆ ದೇಶ-ವಿದೇಶಗಳಿಂದ ಬಂದಿರುವ ನೂರಾರು ವರ್ಷಗಳ ಇತಿಹಾಸವುಳ್ಳ ಕಾರುಗಳ ಪ್ರದರ್ಶನ ಜನರ ಗಮನ ಸೆಳೆಯುತ್ತಿವೆ.

ಈಗಾಗಲೇ ಬೆಂಗಳೂರಿನ ವಿಧಾನಸೌಧದ ಬಳಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಂದ ಚಾಲನೆ ದೊರಕಿದ್ದು, ಇದೀಗ ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ವಿಂಟೇಜ್ ಕಾರ್ ಗಳು ಸಂಚಾರ ಮಾಡಿ ಮೈಸೂರು ದಸರಾ ಮಹೋತ್ಸವಕ್ಕೆ ಮತ್ತಷ್ಟು ಮೆರಗು ನೀಡಲಿವೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ