ಬಿಜೆಪಿ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ಮರಿಗೌಡ ಮತ್ತು ಅವರ ಬೆಂಬಲಿಗರು ಜಿಲ್ಲಾಧಿಕಾರಿ ಸಿ.ಶಿಖಾ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಲ್ಲದೆ, ಅವರನ್ನು ಕಾರಿನಿಂದ ಹೊರಗೆಳೆಯುವ ಪ್ರಯತ್ನ ನಡೆಸಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದು, ರಾಜ್ಯದಲ್ಲಿ ಜಿಲ್ಲಾಧಿಕಾರಿಗಳಿಗೆ ರಕ್ಷಣೆ ಇಲ್ಲದಿದ್ದರೆ ಸಾರ್ವಜನಿಕರ ಗತಿ ಏನು ಎಂದು ರಾಜ್ಯ ಸರಕಾರದ ವಿರುದ್ಧ ಗುಡುಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಮರಿಗೌಡ ಮತ್ತು ಬೆಂಬಲಿಗರನ್ನು ಕೂಡಲೇ ಬಂಧಿಸಿ, ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಸೂಕ್ತ ರಕ್ಷಣೆ ನೀಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.