ಮೈಸೂರಿನ ಜಿಲ್ಲಾಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಹಿನ್ನಲೆ; ಬಿಜೆಪಿ ಜೊತೆ ಮೈತ್ರಿಗೆ ಮುಂದಾದ ಜೆಡಿಎಸ್

ಶುಕ್ರವಾರ, 22 ಫೆಬ್ರವರಿ 2019 (10:59 IST)
ಮೈಸೂರು : ಸಿದ್ಧರಾಮಯ್ಯ ಅವರ ತವರೂರಾದ ಮೈಸೂರಿನ ಜಿಲ್ಲಾಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆ ಕೈ ಕೊಟ್ಟು ಬಿಜೆಪಿ ಜೊತೆ ಕೈ ಜೋಡಿಸಲು  ಜೆಡಿಎಸ್ ನಿರ್ಧರಿಸಿದೆ ಎಂಬುದಾಗಿ ತಿಳಿದುಬಂದಿದೆ.


ಈ ಹಿಂದೆ 30 ತಿಂಗಳ ಅವಧಿಗೆ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡು ಅಧ್ಯಕ್ಷರಾಗಿ ಜೆಡಿಎಸ್, ಉಪಾಧ್ಯಕ್ಷರಾಗಿ ಬಿಜೆಪಿ ಸದಸ್ಯರನ್ನ ಆಯ್ಕೆ ಮಾಡಲಾಗಿತ್ತು. ಆದರೆ 30 ದಿನಗಳ ಅವಧಿ ಮುಗಿದ ಬಳಿಕ ಆ ಸ್ಥಾನಕ್ಕೆ ಸಮ್ಮಿಶ್ರ ಸರ್ಕಾರದ ಕಾಂಗ್ರೆಸ್ ಮತ್ತು ಜೆಡಿಎಸ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಬರುತ್ತಾರೆ ಎಂದು ಕಾಂಗ್ರೆಸ್ ನಾಯಕರು ಆಶಯ ಪಟ್ಟಿದ್ದರು. ಆದರೆ ಇದೀಗ ಮತ್ತೆ ಬಿಜೆಪಿಯೊಂದಿಗೆ ಮೈತ್ರಿ ಮುಂದುವರಿಸಲು ಜೆಡಿಎಸ್ ಮುಂದಾಗಿದೆ.


ಇದರಿಂದ ಕಾಂಗ್ರೆಸ್‍ ಗೆ ಬಾರೀ ಮುಖಭಂಗವಾಗಿದ್ದು, ಜಿಲ್ಲಾಪಂಚಾಯ್ತಿಯಲ್ಲಿ ಹಳೆ ಮೈತ್ರಿ ಮುಂದುವರಿಸಲು ಎಲ್ಲ ಜೆಡಿಎಸ್ ಸದಸ್ಯರನ್ನ ಹಾಗೂ ಬಿಜೆಪಿ ಸದಸ್ಯರನ್ನು ರೆಸಾರ್ಟ್ ಗೆ ಕರೆದೊಯ್ಯಲು ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ