ಮೈಸೂರು ಜಿ.ಪಂ.ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ. ಈ ಬಗ್ಗೆ ಸಚಿವ ಸಾ.ರಾ.ಮಹೇಶ್ ಹೇಳಿದ್ದೇನು?

ಶುಕ್ರವಾರ, 22 ಫೆಬ್ರವರಿ 2019 (11:00 IST)
ಮೈಸೂರು : ನಾಳೆ ಮೈಸೂರು ಜಿ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಹಿನ್ನಲೆಯಲ್ಲಿ ಮತ್ತೆ ಹಳೆ ಮೈತ್ರಿ ಮುಂದುವರಿಸಲು ಜೆಡಿಎಸ್ ಬಿಜೆಪಿ ನಿರ್ಧಾರ ಮಾಡಿದೆ.


ಈ ಬಗ್ಗೆ ಪ್ರತಿಕ್ರಿಯಿಸಿದ ರೇಷ್ಮೆ ಸಚಿವ ಸಾ.ರಾ.ಮಹೇಶ್ ಅವರು, ಬಿಜೆಪಿಯವರಿಗೆ ಈ ಮೊದಲೇ ಮಾತು ಕೊಟ್ಟಿದ್ದೇವೆ. ಹಾಗಾಗಿ ನಾವು ಬಿಜೆಪಿ ಜೊತೆ ಮೈತ್ರಿ ಮುಂದುವರಿಸಿದ್ದೇವೆ’ ಎಂದು ಹೇಳಿದ್ದಾರೆ.


‘ಈ ಬಗ್ಗೆ ನಾವು ಕಾಂಗ್ರೆಸ್ ನಾಯಕರ ಜತೆ ಮಾತಾಡಿದ್ದೇವೆ. ದಿನೇಶ್ ಗುಂಡೂರಾವ್ ಜತೆಯೂ ಚರ್ಚಿಸಲಾಗಿದೆ. ಅಧ್ಯಕ್ಷ, ಉಪಾಧ್ಯಕ್ಷರು ಯಾರೆಂದು ನಿರ್ಣಯವೂ ಆಗಿದೆ. ಈ ಸಂದರ್ಭದಲ್ಲಿ ಬದಲಾವಣೆ ಅಗತ್ಯವಿಲ್ಲ’ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ