ಮೈಸೂರು ವಿವಿ ವೆಬ್‌ಸೈಟ್ ಹ್ಯಾಕ್ ಪ್ರಕರಣ: ಸೈಬರ್ ಕ್ರೈಂ ಅಧಿಕಾರಿಗಳಿಂದ ಸೂಕ್ತ ಕ್ರಮ

ಭಾನುವಾರ, 28 ಆಗಸ್ಟ್ 2016 (11:37 IST)
ಮೈಸೂರು ವಿಶ್ವವಿದ್ಯಾಲಯದ ವೆಬ್‌ಸೈಟ್ ಹ್ಯಾಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಕ್ರೈಂ ವಿಭಾಗದ ಪೊಲೀಸ್ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಸಂಘಟನೆ ಮೈಸೂರು ವಿಶ್ವವಿದ್ಯಾಲಯದ ವೆಬ್‌ಸೈಟ್ ಹ್ಯಾಕ್ ಮಾಡಿದ್ದಾರೆ. ಹಾಗೂ ಯಾವ ಉದ್ದೇಶಕ್ಕಾಗಿ ಹ್ಯಾಕ್ ಮಾಡಿದ್ದಾರೆ ಎಂದು ಸೈಬರ್ ಕ್ರೈಂ ವಿಭಾಗದ ಪೊಲೀಸ್ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
 
ಸಮಿತಿಯ ವರದಿಗಾಗಿ ಕಾಯುತ್ತಿದ್ದೇನೆ......
 
ರಾಜ್ಯ ಪೊಲೀಸ್‌ ಇಲಾಖೆಯ ವೇತನ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಸಮಿತಿಯ ವರದಿಗಾಗೀ ಕಾಯುತ್ತಿದ್ದೇನೆ. ಸಮಿತಿಯವರು ಮಾಹಿತಿ ಕಲೆ ಹಾಕುತ್ತಿದ್ದಾರೆ. ನಾನು ಒಂದು ತಿಂಗಳಿಂದ ವರದಿ ಸಲ್ಲಿಸಲು ಸೂಚಿಸುತ್ತಿದ್ದೇನೆ ವರದಿ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ