ನಾಗಮಂಗಲ ಗಲಭೆ ಪ್ರಕರಣ: ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ತಲೆದಂಡ

Sampriya

ಶುಕ್ರವಾರ, 13 ಸೆಪ್ಟಂಬರ್ 2024 (14:00 IST)
Photo Courtesy X
ಮಂಡ್ಯ: ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಮಂಗಲ ಪಟ್ಟಣ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.

ಕರ್ತವ್ಯ ಲೋಪ, ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ನಾಗಮಂಗಲ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಿ ಗುರುವಾರ ರಾತ್ರಿ ಐಜಿಪಿ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರು, ನಾಗಮಂಗಲ ಗಲಾಟೆಗೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಲಾಗಿದೆ.

ಘಟನೆಗೆ ಕಾರಣಗಳೇನು ಎಂಬುದರ ಕುರಿತು ವರದಿ ನೀಡುವಂತೆ ಈಗಾಗಲೇ ಸೂಚಿಸಿದ್ದೇನೆ‌. ವರದಿ ಬಂದ ನಂತರ ಕಾನೂನು ಚೌಕಟ್ಟಿನಲ್ಲಿ ಮುಲಾಜಿಲ್ಲದೇ ಕಟ್ಟುನಿಟ್ಟಿನ ಕ್ರಮ ಜರುಗಿಸುತ್ತೇವೆ. ಕಾನೂನಿಗಿಂತ ಯಾರು ದೊಡ್ಡವರಲ್ಲ ಎಂದು ಹೇಳಿದ್ದಾರೆ.

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ 150 ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, 52 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ ಎಂದು ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ್ ಮಾಹಿತಿ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ