ಮಲೆನಾಡಿನಲ್ಲಿ ನಾಗರ ಪಂಚಮಿ ಸಂಭ್ರಮ

ಸೋಮವಾರ, 21 ಆಗಸ್ಟ್ 2023 (14:24 IST)
ನಾಡಿನೆಲ್ಲೆಡೆ ಇಂದು ಸಡಗರ-ಸಂಭ್ರಮದಿಂದ ನಾಗರ ಪಂಚಮಿ ಹಬ್ಬ ಆಚರಿಸಲಾಗುತ್ತಿದೆ. ಅದರಂತೆ ಶಿವಮೊಗ್ಗದಲ್ಲಿಯೂ ಕೂಡ ಸಂಭ್ರಮದಿಂದ ನಾಗರಪಂಚಮಿ ಹಬ್ಬ ಆಚರಿಸಲಾಗುತ್ತಿದೆ. ಸೊರಬ ಪಟ್ಟಣದಲ್ಲಿಯೂ, ಹಲವರು ಮನೆಯಲ್ಲಿಯೇ ನಾಗರ ಮೂರ್ತಿಗೆ ವಿಶೇಷ ಪೂಜೆ ಮಾಡಿ ಹಾಲೆರೆದರೆ, ಕೆಲವರು ದೇವಸ್ಥಾನಗಳ ಆವರಣದಲ್ಲಿರುವ ಹುತ್ತ, ನಾಗರಕಲ್ಲಿನ ಮೂರ್ತಿಗೆ ಹಾಲೆರೆಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಮನೆ ಬಾಗಿಲಿಗೆ ಮಾವಿನ ತೋರಣ ಕಟ್ಟಿ, ಮನೆ ಮುಂದೆ ರಂಗೋಲಿ ಹಾಕುವ ಮೂಲಕ ಮಹಿಳೆಯರು ಬೆಳಿಗ್ಗೆಯೇ ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರ ಪಂಚಮಿಯನ್ನು ಸಂಭ್ರಮದಿಂದ ಸ್ವಾಗತಿಸಿದರು. ಮಹಿಳೆಯರು ಭಕ್ತಿ-ಭಾವದಿಂದ ಶೇಂಗಾ, ಕಡಲೆ, ಕೊಬ್ಬರಿ ಉಂಡೆ ಸೇರಿದಂತೆ ಇತರ ಸಿಹಿ ಪದಾರ್ಥಗಳನ್ನು ದೇವರಿಗೆ ನೈವೇದ್ಯ ಅರ್ಪಿಸಿ ವಿಶೇಷ ಪೂಜೆ ನೆರವೇರಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ