‘ವಿದ್ವತ್ ಕಡೆಯವರು ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ’
ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಯ ಆಸ್ಪತ್ರೆಯಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ವಿದ್ವತ್ ಕಡೆಯವರು ಪ್ರಕರಣದ ಹಾದಿ ತಪ್ಪಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನೂ ತಿರುಚಿರಬಹುದು ಎಂದು ಇತರ ಆರೋಪಿಗಳ ಪರ ವಕೀಲ ಬಾಲನ್ ಆರೋಪಿಸಿದ್ದಾರೆ.
ಹೀಗಾಗಿ ಹೈ ಕೋರ್ಟ್ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸುತ್ತೇವೆ. ಒಂದು ವೇಳೆ ಅಲ್ಲೂ ನಮ್ಮ ಪರವಾಗಿ ತೀರ್ಪು ಬರದೇ ಇದ್ದರೆ ಸುಪ್ರೀಂ ಕೋರ್ಟ್ ವರೆಗೂ ಹೋಗಲು ನಾವು ಸಿದ್ಧರಿದ್ದೇವೆ ಎಂದು ವಕೀಲ ಬಾಲನ್ ಸ್ಪಷ್ಟಪಡಿಸಿದ್ದಾರೆ.