ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಂಸದ ನಳಿನ್ ಕುಮಾರ್ ಕಟೀಲ್ ನೇಮಕ

ಬುಧವಾರ, 21 ಆಗಸ್ಟ್ 2019 (11:49 IST)
ಬೆಂಗಳೂರು : ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ನೇಮಕ ಮಾಡಲಾಗಿದೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನವನ್ನು ಸಿಎಂ ಯಡಿಯೂರಪ್ಪ ಅವರಿಂದ ಹಿಂಪಡೆದಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ನೀಡಿದ್ದಾರೆ.


ಈ ಬಗ್ಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಅವರು, ನಮ್ಮ ನಾಯಕರು ನನ್ನ ಮೇಲೆ ನಂಬಿಕೆ ಇಟ್ಟು ಈ ಜವಾಬ್ದಾರಿಯನ್ನು ವಹಿಸಿದ್ದಾರೆ. ನಮ್ಮ ಪಕ್ಷದಲ್ಲಿ ಯಾರು ಉತ್ತಮ ಕೆಲಸ ಮಾಡುತ್ತಾರೋ ಅವರನ್ನು ಗುರುತಿಸುತ್ತಾರೆ. ಹಿರಿಯರೇ ಕರೆದು ಜವಾಬ್ದಾರಿಯನ್ನು ಕೊಟ್ಟಿದ್ದಾರೆ. ಇದೊಂದು ಸವಾಲಾಗಿದೆ. ಎಲ್ಲಾ ಹಿರಿಯ ನಾಯಕರ ಮಾರ್ಗದರ್ಶನ, ಕಿರಿಯರ ಸಹಕಾರದಿಂದ ಪಕ್ಷವನ್ನು ಬಲಪಡಿಸುವ ಶಕ್ತಿ ಬರುತ್ತದೆ ಎಂಬ ವಿಶ್ವಾಸ ಇದೆ ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ