ಕಾಂಗ್ರೇಸ್ ಸರ್ಕಾರವನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ನಳಿನ್ ಕುಮಾರ್ ಕಟೀಲ್

ಸೋಮವಾರ, 12 ಸೆಪ್ಟಂಬರ್ 2022 (21:35 IST)
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದ ಅಕ್ರಮ ಕುರಿತು ತನಿಖೆ ನಡೆಸಲಾಗುವುದು.ನಮ್ಮ ಸರ್ಕಾರದ ಅವಧಿಯಲ್ಲಿ ಪಿಎಸ್ಐ ನೇಮಕಾತಿ ಅಕ್ರಮ ಹೊರಬಂತು.ಕೂಡಲೇ ನಾವು ತನಿಖೆಗೆ ಆದೇಶಿಸಿದೆವು ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
 
ಇದೇ ವೇಳೆ ಮಾತನಾಡಿದ ಅವರು ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಗೆ ಒಳಗಾಗದೆ ಕ್ರಮಕ್ಕೆ ಮುಂದಾಗಿದ್ದೇವೆ.ಸಮಾಜವಾದಿ ಎನ್ನುವ ಸಿದ್ದರಾಮಯ್ಯ ತಾವು ಸಿಎಂ ಆಗಿದ್ದಾಗ ಏಕೆ ನೈತಿಕತೆ ಪ್ರದರ್ಶನ ಮಾಡಲಿಲ್ಲ.ಡಿವೈಎಸ್ಪಿ ಗಣಪತಿ ಪ್ರಕರಣದಲ್ಲಿ ಇವರು ಏನು ಮಾಡಿದರು?ಸಿದ್ದರಾಮಯ್ಯ ಸರ್ಕಾರದ ಅವಧಿಯ ಹಗರಣಗಳನ್ನು ಬಚ್ಚಿಟ್ಟಿದ್ದಾರೆ.
ಅದನ್ನು ಬಿಚ್ಚಿಡುವ ಕೆಲಸವನ್ನು ನಾವು ಮಾಡುತ್ತಿದ್ದೇವೆ.ನಿಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಏಕೆ ಬೇಲ್ ಮೇಲೆ‌ ಇದ್ದಾರೆ.ಸೋನಿಯಾ ಗಾಂಧಿ, ರಾಹುಲ್ ಗಾಂಧಿ‌ ಏಕೆ ಬೇಲ್‌ ಮೇಲೆ ಇದ್ದಾರೆ.ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರು ಏಕೆ ಬೇಲ್ ಮೇಲೆ ಇದ್ದಾರೆ. ಹೀಗೆ ಕಾಂಗ್ರೇಸ್ ಗೆ ಪ್ರಶ್ನೆಗಳ ಮೇಲೆ ಪ್ರಶ್ನೆಯನ್ನ ನಳಿನ್ ಕುಮಾರ್ ಕಟೀಲ್ ಕೇಳಿದ್ದಾರೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ