ಬಿಬಿಎಂಪಿ ಅಧಿಕಾರಿಗಳ ಜೊತೆ ನಾಲಪಡ್ ಕಿರಿಕ್

ಬುಧವಾರ, 14 ಸೆಪ್ಟಂಬರ್ 2022 (15:10 IST)
ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ನಲಪಾಡ್ ಅಕಾಡೆಮಿ ಒತ್ತುವರಿ ತೆರವು ಮಾಡುವ ಸಂದರ್ಭದಲ್ಲಿ ಹ್ಯಾರಿಸ್​ ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದ್ದು, ಒತ್ತುವರಿ ತೆರವು ತಡೆಗೆ ಪ್ರಯತ್ನಿಸಲಾಗಿದೆ. ಆದರೆ ಅಧಿಕಾರಿಗಳು ತಮ್ಮ ಕೆಲಸವನ್ನು ಮಾಡಿಕೊಂಡು ಹೋಗಿದ್ದಾರೆ.
ಬಿಬಿಎಂಪಿ ಅಧಿಕಾರಿಗಳಿಗೆ ನಲಪಾಡ್​ ಅಕಾಡೆಮಿಯ ಸಿಬ್ಬಂದಿಗಳು ಅವಾಜ್​ ಹಾಕಿದ್ದು, ನೋಟಿಸ್​ ನೀಡದೆ ತೆರವಿಗೆ ಮುಂದಾಗಿದ್ದೀರಿ ಎಂದು ಪಾಲಿಕೆಯಿಂದ ನಡೆಸಲಾಗುತ್ತಿದ್ದ ಡೆಮಾಲಿಷನ್ ತಡೆಯುವುದಕ್ಕೆ ಮುಂದಾದರು. ರಾಜ ಕಾಲುವೆ ಒತ್ತುವರಿ ಮಾಡಿಕೊಂಡಿಲ್ಲ ಎಂಬುದಾಗಿ ಹೇಳಿ ದಾಖಲೆಗಳನ್ನು ನೀಡುವುದಾಗಿ ತಿಳಿಸಿದ್ದ ನಲಪಾಡ್​, ಒತ್ತುವರಿ ತೆರವು ಮಾಡಿಲ್ಲ ಎನ್ನುವುದಕ್ಕೆ ಯಾವುದೇ ದಾಖಲೆಗಳನ್ನು ನೀಡಿರಲಿಲ್ಲ. ಜತೆಗೆ, ಸಿಬ್ಬಂದಿ ತೆರವು ಕಾರ್ಯಾಚರಣೆಗೆ ಅಡ್ಡಿ ಪಡಿಸಿದರು. ಆದರೂ ಬಿಬಿಎಂಪಿ ಅಧಿಕಾರಿಗಳು ಇದಕ್ಕೆ ಬಗ್ಗದೆ ಒತ್ತುವರಿಯನ್ನು ತೆರವು ಮಾಡಿದರು.
ಜನರ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಆದರೆ, ಈವರೆಗೂ ಯಾವುದೇ ಸಮಸ್ಯೆ ಪರಿಹಾರ ಮಾಡಿಲ್ಲ. ಆದರೆ, ಒತ್ತುವರಿ ತೆರವು ಮಾಡುವುದಕ್ಕೆ ಮುಂದಾಗಿದ್ದೀರ ಎಂದು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ