ರಾಜ್ಯಾದ್ಯಂತ ಕಾವೇರಿ ಕಿಚ್ಚು ಹೆಚ್ಚಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಮ್ಮ ಮೆಟ್ರೊ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ನಿರ್ದೇಶಕ ವಸಂತ್ ರಾವ್ ಮಾಹಿತಿ ನೀಡಿದ್ದಾರೆ.
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಕರಣದಲ್ಲಿ ರಾಜ್ಯಕ್ಕೆ ಹಿನ್ನೆಡೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಇಂದು ಮಧ್ಯಾಹ್ನ 12.30 ರಿಂದಲೇ ಮೆಟ್ರೊ ಸಂಚಾರವನ್ನು ದಿಢೀರ ಸ್ಥಗಿತಗೊಳಿಸಲಾಗಿದೆ.
ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ರಾಜ್ಯಾದ್ಯಂತ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಅಘೋಷಿತ ಬಂದ್ ಪರಿಸ್ಥಿತಿ ಎದುರಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ