Namma Metro:ತಂಬಾಕು ತಿನ್ನುವವರು ಮೆಟ್ರೋದಲ್ಲಿ ಹೋಗುವಾಗ ಹುಷಾರು, ಬೀಳುತ್ತೇ ದಂಡ

Sampriya

ಬುಧವಾರ, 23 ಏಪ್ರಿಲ್ 2025 (15:23 IST)
Photo Credit X
ಬೆಂಗಳೂರು: ಇನ್ಮುಂದೆ ನಮ್ಮ ಮೆಟ್ರೊದಲ್ಲಿ ತಂಬಾಕು ಜಗಿದರೆ ಬೀಳಲಿದೆ ದಂಡ. ಈಚೆಗೆ ಸಾಮಾಜಿಕ ಜಾಲತಾಣದಲ್ಲಿ ನಮ್ಮ ಮೆಟ್ರೊ ರೈಲಿನಲ್ಲಿ ಪ್ರಯಾಣಿಕರೊಬ್ಬರು ಪಾನ್‌ಮಸಾಲ ಸೇವಿಸಿದ ವಿಡಿಯೊ ವೈರಲ್ ಆದ ಬೆನ್ನಲ್ಲೇ ಬಿಎಂಆರ್‌ಸಿಎಲ್‌ ಎಚ್ಚೆತ್ತುಕೊಂಡು ಈ ನಿರ್ಧಾರಕ್ಕೆ ಮುಂದಾಗಿದೆ.

ಮೆಟ್ರೊ ನಿಲ್ದಾಣ ಹಾಗೂ ರೈಲುಗಳ ಒಳಗೆ ತಂಬಾಕು ಆಧರಿತ ಉತ್ಪನ್ನಗಳನ್ನು ಸೇವಿಸುವ ಪ್ರಯಾಣಿಕರಿಗೆ ದಂಡ ವಿಧಿಸಲು ನಿರ್ಧರಿಸಿದೆ.

ಈಚೆಗೆ ಗುಟ್ಕಾ, ಪಾನ್ ಮಸಾಲಾದಂತಹ ತಂಬಾಕು ಆಧಾರಿತ ಉತ್ಪನ್ನಗಳನ್ನು ಅಗಿದು ಉಗುಳುವವರ ಸಂಖ್ಯೆ ಜಾಸ್ತಿಯಾಗುತ್ತೆಲೆ ಇದೆ. ಅದಲ್ಲದೆ ಸಾರ್ವಜನಿಕರು ಈ ಬಗ್ಗೆ ತಮ್ಮ ದೂರನ್ನು ವ್ಯಕ್ತಪಡಿಸಿದ್ದಾರೆ.

ಮೆಟ್ರೊ ರೈಲು ಮತ್ತು ನಿಲ್ದಾಣಗಳಲ್ಲಿ ಕಣ್ಗಾವಲು ಹೆಚ್ಚಿಸುವ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ನಿಯಮಗಳ ಪ್ರಕಾರ ದಂಡ ವಿಧಿಸಲಾಗುವುದು.

ಮುಂದಿನ ದಿನಗಳಲ್ಲಿ ಅಂತಹ ವಸ್ತುಗಳನ್ನು ಲೋಹ ಶೋಧಕಗಳ ಮೂಲಕ ಪತ್ತೆಹಚ್ಚಲು ಸಾಧ್ಯವಾಗದ ಕಾರಣ, ಎಲ್ಲ ಮೆಟ್ರೊ ನಿಲ್ದಾಣಗಳಲ್ಲಿ ಅನುಮಾನ ಬಂದ ಜಾಗಗಳಲ್ಲಿ ಆಗಾಗ ತಪಾಸಣೆ ಮಾಡಲಾಗುವುದು . ತಂಬಾಕು ಪದಾರ್ಥ ಜಗಿಯುವ ಪ್ರಯಾಣಿಕರನ್ನು ಸೂಕ್ಷ್ಮ ರೀತಿಯಲ್ಲಿ ಗಮನಿಸಲು, ಜನರೊಂದಿಗೆ ಈ ಕುರಿತು ಸಂವೇದನಾಶೀಲವಾಗಿ ನಡೆದುಕೊಳ್ಳಲು ಪ್ಲ್ಯಾಟ್‌ಫಾರ್ಮ್ ಭದ್ರತಾ ಸಿಬ್ಬಂದಿಗೆ ತರಬೇತಿ ನೀಡಲಾಗುವುದು.

ಈ ವೇಳೆ ನಿಯಮ ಉಲ್ಲಂಘಟನೆ ಮಾಡಿದ್ದು ಕಂಡುಬಂದಲ್ಲಿ  ಪ್ಲ್ಯಾಟ್‌ಫಾರ್ಮ್ ಭದ್ರತಾ ಸಿಬ್ಬಂದಿಗೆ ಎಚ್ಚರಿಕೆ ನೀಡಲು ಕೇಂದ್ರ ಭದ್ರತಾ ಕಣ್ಗಾವಲು ಕೊಠಡಿಗೆ ಸೂಚನೆ ನೀಡಲಾಗಿದೆ.

ತಂಬಾಕು ಆಧರಿತ ಉತ್ಪನ್ನಗಳನ್ನು ಬಳಸದಂತೆ ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸಲು ಅಭಿಯಾನ ನಡೆಸಲಾಗುವುದು ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ