ನಾಳೆ ನಮ್ಮ ಮೆಟ್ರೋ ಸಂಚಾರ ಸ್ಥಗಿತ, ಬಂದ್ ಹಿನ್ನೆಲೆಯಲ್ಲಿ ಬಿಗಿ ಭದ್ರತೆ

ಗುರುವಾರ, 8 ಸೆಪ್ಟಂಬರ್ 2016 (19:59 IST)
ಬೆಂಗಳೂರಿನಲ್ಲಿ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ನಾಳೆ ನಮ್ಮ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗುತ್ತದೆ ಎಂದು ಬಿಎಂಆರ್‌ಸಿಎಲ್ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದೆ.ಈ ನಡುವೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಂತಿಯುತವಾಗಿ ಬಂದ್ ಆಚರಿಸಬೇಕೆಂದು ಮನವಿ ಮಾಡಿದರು.

ಶಾಲೆ, ಕಾಲೇಜುಗಳಿಗೆ ಅಧಿಕೃತವಾಗಿ ರಜೆ ಘೋಷಿಸಿದರು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು ಎಂದು ಸಿಎಂ ಜನತೆಯಲ್ಲಿ ಮನವಿ ಮಾಡಿದರು.  ಬೆಂಗಳೂರಿನಲ್ಲಿ ಭದ್ರತೆಗೆ 25,000 ಪೊಲೀಸರನ್ನು ನಿಯೋಜಿಸಿರುವುದಾಗಿ ತಿಳಿಸಿದರು.

ಕೇಂದ್ರದಿಂದ 10 ತುಕಡಿ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ. ಕಾವೇರಿ ನೀರಿನ ವಿಷಯದಲ್ಲಿ ಯಾರಿಗೂ ಪ್ರಚೋದನೆ ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪೊಲೀಸ್ ಕಣ್ಗಾವಲು ಹಾಕಲಾಗುವುದು ಮತ್ತು 20 ಸಾವಿರ ಹೋಮ್‌ಗಾರ್ಡ್ಸ್ ನಿಯೋಜನೆ ಮಾಡಲಾಗುತ್ತದೆ. ಕರ್ನಾಟಕ ಬಂದ್‌ಗೆ ಬೆಂಗಳೂರು ವಕೀಲರ ಸಂಘ ಬೆಂಬಲ ವ್ಯಕ್ತಪಡಿಸಿದೆ.

ಬೆಂಗಳೂರು ವಕೀಲರ ಸಂಘ ಈ ಕುರಿತು ನಿರ್ಣಯ ವ್ಯಕ್ತಪಡಿಸಿದೆ. ಕರ್ನಾಟಕ ಬಂದ್‌‌ಗೆ ಬೆಂಬಲ ಸೂಚಿಸಿ ಎಲೆಕ್ಟ್ರಾನಿಕ್ ಕಂಪನಿಯ ಎಲ್ಲಾ ಐಟಿ ಕಂಪನಿಗಳಿಗೆ ರಜೆ ಘೋಷಿಸಲಾಗಿದೆ. ಬಾರ್‌ಗಳನ್ನು ಇಂದು ಮಧ್ಯರಾತ್ರಿಯಿಂದ ಮುಚ್ಚುವಂತೆ ಡಿಸಿ ಆದೇಶಿಸಿದ್ದಾರೆ. ಶಾಂತಿ, ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಡಿಸಿ ಈ ಆದೇಶ ನೀಡಿದ್ದಾರೆ.  

ವೆಬ್ದುನಿಯಾವನ್ನು ಓದಿ