ನಮೋ ಬ್ರಿಗೇಡ್‌ನಿಂದ ಮೋದಿ ಪಿಎಂ, ರಾಯಣ್ಣ ಬ್ರಿಗೇಡ್‌ನಿಂದ ಬಿಎಸ್‌ವೈ ಸಿಎಂ: ಈಶ್ವರಪ್ಪ

ಗುರುವಾರ, 29 ಸೆಪ್ಟಂಬರ್ 2016 (16:54 IST)
ಲೋಕಸಭೆ ಚುನಾವಣೆಗೂ ಮುನ್ನ ರಚನೆಯಾದ ನಮೋ ಬ್ರಿಗೇಡ್ ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿಸಲು ಹೇಗೆ ಸಹಕಾರಿಯಾಯಿತೋ ಅದೇ ಮಾದರಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಬಿ.ಎಸ್.ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಲು ಸಹಕಾರಿಯಾಗುತ್ತದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
 
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್ 1 ರಂದು ಹಾವೇರಿಯಲ್ಲಿ ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶಕ್ಕೆ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಬಿಜೆ ಮುಖಂಡರು ಬಂದೇ ಬರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 
 
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನಿಂದ ಬಿಜೆಪಿಗೆ ಯಾವುದೇ ಹಾನಿಯಾಗುವುದಿಲ್ಲ. ಬ್ರಿಗೇಡ್‌ನಿಂದ ಕಾಂಗ್ರೆಸ್ ಪಕ್ಷಕ್ಕೆ ನಡುಕ ಹುಟ್ಟುವುದು ಖಚಿತ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. 
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಮುಂದಾಗಿದ್ದರು. ರಾಯಣ್ಣ ಬ್ರಿಗೇಡ್ ಸ್ಥಾಪನೆಗೆ ಸ್ವಪಕ್ಷದಲ್ಲಿಯೇ ಸಾಕಷ್ಟು ವಿರೋಧ ಉಂಟಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ