ಹಾಲಿನ ದರ ಏರಿಕೆಗೆ ಸಾರ್ವನಿಕರ ಆಕ್ರೋಶ: ಮೊದಲು ಉಚಿತ ಯೋಜನೆ ನಿಲ್ಲಿಸಿ ಎಂದ ನೆಟ್ಟಿಗರು

Krishnaveni K

ಸೋಮವಾರ, 2 ಡಿಸೆಂಬರ್ 2024 (08:46 IST)
ಬೆಂಗಳೂರು: ನಂದಿನಿ ಹಾಲಿನ ದರ ಮತ್ತೆ ಏರಿಕೆಯಾಗುವ ಸುದ್ದಿ ಬಂದಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈಗಾಗಲೇ ಅಡುಗೆ ಎಣ್ಣೆ, ಬೇಳೆ, ಕಾಳುಗಳ ಬೆಲೆ ಗಗನಕ್ಕೇರಿದ್ದು, ಈಗ ಹಾಲಿನ ದರವನ್ನು ಮತ್ತೊಮ್ಮೆ ಏರಿಕೆ ಮಾಡಲು ಹೊರಟಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
 

ಕೆಲವು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಹಾಲಿನ ದರ ಏರಿಕೆ ಮಾಡುವ ಸುಳಿವು ನೀಡಿದ್ದರು. ನಂದಿನಿ ಹಾಲಿನ ದರ ಏರಿಕೆ ಮಾಡಿ ಆ ಹಣವನ್ನು ರೈತರಿಗೆ ನೀಡುವುದಾಗಿ ಹೇಳಿದ್ದರು. ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಒಮ್ಮೆ ನಂದಿನಿ ಹಾಲಿನ ದರ ಏರಿಕೆ ಮಾಡಲಾಗಿತ್ತು. ಇದಾದ ಬಳಿಕ ಈಗ ಒಂದೇ ವರ್ಷದಲ್ಲಿ ಎರಡನೇ ಬಾರಿಗೆ ದರ ಏರಿಕೆ ಮಾಡಲು ಸರ್ಕಾರ ಮುಂದಾಗಿದೆ.

ಈ ಬಾರಿ ಕೋಲಾರ ಹಾಲು ಒಕ್ಕೂಟದ ಅಧ್ಯಕ್ಷ, ಶಾಸಕ ಕೆ.ವೈ. ನಂಜೇಗೌಡ ಈ ಬಗ್ಗೆ ಸುಳಿವು ನೀಡಿದ್ದಾರೆ. ನಂದಿನಿ ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆದಿದ್ದು ಆ ಹಣವನ್ನು ರೈತರಿಗೆ ನೀಡಲಾಗುವುದು ಎಂದಿದ್ದಾರೆ. ಈ ಬಾರಿ 5 ರೂ.ವರೆಗೆ ದರ ಏರಿಕೆ ಮಾಡುವ ಬಗ್ಗೆ ಸುಳಿವು ನೀಡಿದ್ದಾರೆ.

ಆದರೆ ಬೆಲೆ ಏರಿಕೆ ಬಗ್ಗೆ ಸುದ್ದಿ ತಿಳಿಯುತ್ತಿದ್ದಂತೇ ಸಾರ್ವಜನಿಕರಿಂದ ತೀವ್ರ ಆಕ್ರೋಶ ಕೇಳಿಬಂದಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ನೆಟ್ಟಿಗರು ಮೊದಲು ಉಚಿತ ಗ್ಯಾರಂಟಿಗಳನ್ನು ನಿಲ್ಲಿಸಿ. ರೈತರಿಗೆ ನೀಡುತ್ತೇವೆ ಎನ್ನುವುದು ಒಂದು ನೆಪ. ಇದೆಲ್ಲಾ ಉಚಿತ ಗ್ಯಾರಂಟಿ ಯೋಜನೆಗಳ ಫಲ ಎಂದು ಆಕ್ರೋಶ ವಯಕ್ತಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ