ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನಂದೀಶ್ ರೆಡ್ಡಿ ನೇಮಕ

ಸೋಮವಾರ, 6 ಫೆಬ್ರವರಿ 2023 (10:37 IST)
ಬೆಂಗಳೂರು : ಅಸಮಾಧಾನಿತರನ್ನು ಸಮಾಧಾನ ಪಡಿಸಲು ಬಿಜೆಪಿ ಮುಂದಾಗಿದ್ದು, ಮಾಜಿ ಶಾಸಕ ನಂದೀಶ್ ರೆಡ್ಡಿ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನೇಮಿಸಿ ಆದೇಶ ಹೊರಡಿಸಿದೆ.

ಇತ್ತೀಚೆಗೆ ನಂದೀಶ್ ರೆಡ್ಡಿ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಹೀಗಾಗಿ, ಕಾಂಗ್ರೆಸ್ ಸೇರುವ ಬಗ್ಗೆ ಮನಸ್ಸು ಮಾಡಿದ್ದಾರೆಂಬ ಸುದ್ದಿ ಹರಿದಾಡಿತ್ತು. ಅಷ್ಟೇ ಅಲ್ಲ ಸಚಿವ ಬೈರತಿ ಬಸವರಾಜು ವಿರುದ್ಧ ರೆಡ್ಡಿ ಬಂಡಾಯ ಎದ್ದಿದ್ದರು. 

ನಂದೀಶ್ ರೆಡ್ಡಿಗೆ ಪಕ್ಷದಲ್ಲಿ ಮಹತ್ವದ ಸ್ಥಾನ ಕೊಟ್ಟು ಹಿಡಿದಿಟ್ಟುಕೊಳ್ಳುವ ತಂತ್ರವನ್ನು ಬಿಜೆಪಿ ಮಾಡಿದೆ. ಹೀಗಾಗಿ ಅವರನ್ನು ಪಕ್ಷದ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ