ಕಳಲೆ ಕೇಶವಮೂರ್ತಿ, ಸಚಿವ ಎಚ್.ಸಿ.ಮಹದೇವಪ್ಪ ಭೇಟಿ: ರಾಜಕೀಯ ಕೋಲಾಹಲ

ಗುರುವಾರ, 2 ಫೆಬ್ರವರಿ 2017 (18:26 IST)
ನಂಜನಗೂಡು ಉಪಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಮುಖಂಡ ಕಳಲೆ ಕೇಶವಮೂರ್ತಿ ಅವರು ಸಚಿವ ಎಚ್.ಸಿ.ಮಹದೇವಪ್ಪ ನಿವಾಸಕ್ಕೆ ಭೇಟಿ ನೀಡಿ ನೀಡಿರುವುದು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
 
ಯಾವುದೇ ಕಾರಣಕ್ಕೂ ಜೆಡಿಎಸ್ ಪಕ್ಷ ತೊರೆಯುವುದಿಲ್ಲ ಎಂದು ಹೇಳುತ್ತಿದ್ದ ಕೇಶವಮೂರ್ತಿ ದಿಢೀರನೆ ಸಚಿವ ಮಹದೇವಪ್ಪ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. 
 
ಈಗಾಗಲೇ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ. ನಂಜನಗೂಡು ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಕೇಶವಮೂರ್ತಿ ಸ್ಪರ್ಧಿಸುತ್ತಾರೆ ಎಂದು ಹೇಳಲಾಗುತ್ತಿತ್ತು. ಆದರೆ, ಕೇಶವಮೂರ್ತಿ ಕಾಂಗ್ರೆಸ್ ಸಚಿವರ ನಿವಾಸಕ್ಕೆ ತೆರಳಿ ಚರ್ಚೆ ನಡೆಸಿರುವುದು ನಂಜನಗೂಡು ಕ್ಷೇತ್ರದಲ್ಲಿ ಬಾರಿ ತಲ್ಲಣ ಮೂಡಿಸಿದೆ.  
 
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂಡೆದ್ದ ಮಾಜಿ ಶಾಸಕ ಶ್ರೀನಿವಾಸ್ ಪ್ರಸಾದ್, ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರಿದ್ದರಿಂದ ನಂಜನಗೂಡು ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ