ನಂಜನಗೂಡು ಉಪಚುನಾವಣೆ: ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಸಭೆ

ಶುಕ್ರವಾರ, 17 ಫೆಬ್ರವರಿ 2017 (16:19 IST)
ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆದಿದೆ.
 
ನಂಜನಗೂಡಿನ ಶ್ರೀಶೃಂಗೇರಿ ಶಂಕರಮಠದಲ್ಲಿ ನಡೆದ ಜೆಡಿಎಸ್ ಸಭೆಯಲ್ಲಿ ಸಂದೇಶ ನಾಗರಾಜ್, ಉಪಚುನಾವಣೆಯಲ್ಲಿ ಅಭ್ಯರ್ಥಿಯಾಗುವ ಆಕಾಂಕ್ಷೆ ಹೊಂದಿರುವ ಶಿವಕುಮಾರ್, ಮೈಸೂರು ಮೇಯರ್ ಸೇರಿದಂತೆ ಇತರ ನಾಯಕರು ಉಪಸ್ಥಿತರಿದ್ದರು.
 
ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಹಣದ ಪ್ರಭಾವದಿಂದ ಪ್ರಚಾರ ನಡೆಸುತ್ತಿವೆ. ಆದರೆ, ನಮಗೆ ಸಾಲ ಮಾಡಿ ಚುನಾವಣೆ ಎದುರಿಸುವ ಸ್ಥಿತಿ ಎದುರಾಗಿದೆ ಎಂದು ಹೇಳಿದ್ದಾರೆ.  
 
ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಸಂದಿಗ್ಧ ಸ್ಥಿತಿ ಎದುರಾಗಿದೆ. ಪಕ್ಷದ ಕಾರ್ಯಕರ್ತರ ಅಭಿಪ್ರಾಯಪಡೆದು ಮುಂದುವರೆಯುತ್ತೇನೆ ಎಂದು ತಿಳಿಸಿದ್ದಾರೆ.
 
ಕಳಲೇ ಕೇಶವಮೂರ್ತಿ ನನ್ನನಾಗಲಿ ಅಥವಾ ದೇವೇಗೌಡರನ್ನಾಗಲಿ ಕೇಳಿ ಪಕ್ಷ ಬಿಟ್ಟಿಲ್ಲ. ಆದರೆ, ನನ್ನ ಮತ್ತು ತಂದೆಯವರ ಹೆಸರು ತೆಗೆದುಕೊಂಡಿರುವುದಕ್ಕೆ ಬೇಸರವಾಗಿದೆ ಎಂದು ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ