ಕರಾವಳಿಯಲ್ಲಿ ನವೋ ಅಬ್ಬರ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಪ್ರಧಾನಿ ಮೋದಿ

Sampriya

ಭಾನುವಾರ, 14 ಏಪ್ರಿಲ್ 2024 (20:38 IST)
Photo Courtesy X
ಮಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆ ಕರ್ನಾಟಕದಲ್ಲಿ ಮೊದಲ ಮತಭೇಟೆ ಶುರುಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿನಲ್ಲೂ ಅಭ್ಯರ್ಥಿಗಳ ಪರ ಮತಯಾಚಿಸಿದರು.

ಇನ್ನೂ ಮೋದಿ ಆಗಮನದ ಹಿನ್ನೆಲೆ ಸಾವವಿರಾರು ಬಿಜೆಪಿ ಕಾರ್ಯಕರ್ತರು ಮೋದಿಯನ್ನು ಅದ್ಧೂರಿಯಾಗಿ ಸ್ವಾಗತಿಸಿದರು.  ಇನ್ನೂ ರಸ್ತೆಯ ಇಕ್ಕೆಲಗಳಲ್ಲಿ ಕಿಕ್ಕಿರಿದು ಸೇರಿದ್ದ ಜನಸ್ತೋಮದತ್ತ ಕೈಬೀಸುತ್ತಾ ಸಾಗಿದ ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದರು.

ಸಾಮಾಜಿಕ ಕ್ರಾಂತಿಯ ಹರಿಕಾರ ಬ್ರಹ್ಮಶ್ರೀ ನಾರಾಯಣಗುರು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ರೋಡ್ ಶೋ ಆರಂಭಿಸಿದ ಅವರು ಬಿಲ್ಲವ ಸಮುದಾಯದ ಮುನಿಸು ಶಮನಗೊಳಿಸುವ ಪ್ರಯತ್ನ ಮಾಡಿದರು. ಇನ್ನೂ ಮೋದಿಗೆ ರೋಡ್‌ ಶೂ ಉದ್ದಕ್ಕೂ ಬಿಜೆಪಿ ಕಾರ್ಯಕರ್ತರು ಹೂವಿನ ಸುರಿಮಳೆ ಗೈದು ಮೋದಿಗೆ ಬೆಂಬಲ ಸೂಚಿಸಿದರು.  ಇನ್ನೂ ಅಭಿಮಾನಿಗಳತ್ತ ಕೈಬೀಸುತ್ತಾ ಸಾಗಿದ ಪ್ರಧಾನಿ ಅವರು ಕಡಲ ಮಂದಿಯಲ್ಲಿ ಉತ್ಸಾಹ ತುಂಬಿದರು.

ಮೋದಿ ಅವರು ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡುವಾಗ ದಕ್ಷಿಣ ಕನ್ನಡ ಕ್ಷೇತ್ರದ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಶಾಸಕರ ಜೊತೆಯಲ್ಲಿದ್ದರು.

ನೆಚ್ಚಿನ ನೇತಾರನ ಫೋಟೊ ಕ್ಲಿಕ್ಕಿಸಲು ಕೆಲವರು ಹರಸಾಹಸ ಪಟ್ಟರು. ಮಂತ್ರ ಘೋಷ, ಶ್ರೀರಾಮ ಭಜನೆ, ಚೆಂಡೆವಾದನ ಪ್ರದರ್ಶನ ಮಾಡಲಾಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ