ಅಮೃತ ಕ್ರೀಡಾ ದತ್ತು ಯೋಜನೆಯ ಮೂಲಕ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ ಪ್ಯಾರಿಸ್ ಓಲಂಪಿಕ್‍ಗೆ ಸಿದ್ದತೆ

ಸೋಮವಾರ, 20 ಸೆಪ್ಟಂಬರ್ 2021 (20:30 IST)
ಬೆಂಗಳೂರು: ಕೇಂದ್ರ ಸರ್ಕಾರ ಕೈಗೊಂಡಿರುವ ವಿಧಾನದಿಂದ ರಾಜ್ಯದಲ್ಲಿ ಗ್ರಾಮೀಣ ಮಟ್ಟದ ಕ್ರೀಡಾ ಪ್ರತಿಭೆಗಳನ್ನು ಗುರುತಿಸುವ ಕೆಲಸ ಆಗುತ್ತಿದೆ. ಗ್ರಾಮೀಣ ಕ್ರೀಡೆಗೂ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಅಮೃತ ಕ್ರೀಡಾ ದತ್ತು ಯೋಜನೆ ಮೂಲಕ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ 2024 ರ ಪ್ಯಾರಿಸ್ ಓಲಂಪಿಕ್ಗೆ ಸಿದ್ದತೆ ಮಾಡಲಾಗುತ್ತಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಹೇಳಿದರು.
 
ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ರೋಗಿಗಳ ವಿಕಾಸ ಸೌಧದಿಂದ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಚಿವ ಡಾ. ನಾರಾಯಣಗೌಡ ಮಾತನಾಡುತ್ತಾ ರಾಜ್ಯದಲ್ಲಿ ಕ್ರೀಡೆಗೆ ಎಲ್ಲ ರೀತಿಯ ಸೌಲಭ್ಯ ನೀಡಲಾಗುತ್ತಿದೆ. ಅಮೃತ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮುಖ್ಯಮಂತ್ರಿಗಳು ಅಮೃತ ಕ್ರೀಡಾ ದತ್ತು ಯೋಜನೆ ಘೋಷಿಸಿದ್ದಾರೆ. 75 ಕ್ರೀಡಾಪಟುಗಳನ್ನು ವೈಜ್ಞಾನಿಕವಾಗಿ ಗುರುತಿಸಿ ಅಂತರಾಷ್ಟ್ರೀಯ ಮಟ್ಟದ ತರಬೇತಿ ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ಗ್ರಾಮೀಣ ಮಟ್ಟದಲ್ಲಿ ಕ್ರೀಡಾಪ್ರತಿಭೆಗಳ ಆಯ್ಕೆ ಮಾಡುವ ಪ್ರಕ್ರಿಯೆ ನಡೆಯುತ್ತಿರುವ, 2.31 ಲಕ್ಷ ಕ್ರೀಡಾಪ್ರತಿಭೆಗಳನ್ನ ಗುರುತಿಸಲಾಗಿದೆ. ಖೇಲೊ ಇಂಡಿಯಾ ಕೇಂದ್ರಗಳಲ್ಲಿ, ಅಮೃತ ಕ್ರೀಡಾ ದತ್ತು ಯೋಜನೆ ಅಡಿ ಪದಕ ಗೆಲ್ಲುವ ಸಾಮರ್ಥ್ಯ ಇರುವ ಆಯ್ದ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಅಂತರಾಷ್ಟ್ರೀಯ ಮಟ್ಟದ ತರಬೇತಿ ಕೊಡುವುದು ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಗೆ ಸಚಿವ ಡಾ. ನಾರಾಯಣಗೌಡ ಬೇಡಿಕೆ.
 
ಕ್ರೀಡಾ ಮೂಲಭೂತ ಸೌಲಭ್ಯ ಕಲ್ಪಿಸಲು ರೂ .40 ಕೋಟಿ ಅನುದಾನಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ: 
 
ಮುಂದಿನ ಮಾರ್ಚ್‍ನಲ್ಲಿ ಖೇಲೊ ಇಂಡಿಯಾ ಯುನಿವರ್ಸಿಟಿ ಗೇಮ್ಸ್ ಬೆಂಗಳೂರಿನಲ್ಲಿ ಆಯೋಜಿಸಲಾಗುತ್ತಿದೆ. ಅದಕ್ಕಾಗಿ ಎಲ್ಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಕ್ರೀಡಾಕೂಟದ ಆಯೋಜನೆ ಹಾಗೂ ಕ್ರೀಡಾ ಮೂಲಸೌಕರ್ಯಕ್ಕಾಗಿ ಸುಮಾರು ರೂ. 65 ಕೋಟಿ ವೆಚ್ಚವಾಗಲಿದೆ. ಇದಕ್ಕೆ ಕೇಂದ್ರ ಸರ್ಕಾರಿಂದ ರೂ. 40 ಕೋಟಿ ಅನುದಾನ ಒದಗಿಸುವಂತೆ ಕೇಂದ್ರ ಸಚಿವ ಅನುರಾಗ್‍ ಠಾಕೂರ್‍ ಅವರಿಗೆ ಸಚಿವ ಡಾ. ನಾರಾಯಣಗೌಡ ಮನವಿ ಮಾಡಿದರು.
 
ಈ ಮೊದಲು ಮಾತನಾಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್‍  ಓಲಂಪಿಕ್‍ನಲ್ಲಿ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡಲು, ಅಷ್ಟೇ ಗುಣಮಟ್ಟದ ತರಬೇತಿ ಅವಶ್ಯಕತೆ ಇದೆ. ಚೀನಾ, ಅಮೇರಿಕಾ ಮಾದರಿಯಲ್ಲಿ ಅಂತರಾಷ್ಟ್ರೀಯ ಮಟ್ಟದ ತರಬೇತಿಯನ್ನು ನಮ್ಮ ದೇಶದ ಕ್ರೀಡಾಪಟುಗಳಿಗೆ ನೀಡಬೇಕು. ತಳಮಟ್ಟದಲ್ಲೇ ಕ್ರೀಡಾಪ್ರತಿಗಳ ಪ್ರತಿಶೋಧನೆ ಆಗಬೇಕು. ವಿದ್ಯಾರ್ಥಿ ದೆಸೆಯಲ್ಲಿ ಇರುವಾಗಲೇ ಗುಣಮಟ್ಟದ ತರಬೇತಿ ಆರಂಭವಾಗಬೇಕು. ಗ್ರಾಮೀಣ ಕ್ರೀಡೆಗಳಿಗೆ, ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಹೆಚ್ಚಿನ ಪ್ರೋತ್ಸಾಹದ ಅಗತ್ಯವಿದೆ. ಶಾಲೆಗಳಲ್ಲಿ ಕ್ರೀಡೆಗೆ ಸಮಯ ಮೀಸಲಿಟ್ಟು, ಕ್ರೀಡೆಯಲ್ಲಿ ವಿದ್ಯಾರ್ಥಿಗಳಿಗೆ ಆಸಕ್ತಿ ಮೂಡುವಂತೆ ಮಾಡಬೇಕು ಎಂದು ಹೇಳಿದರು. ಅಲ್ಲದೆ ರಾಜ್ಯಗಳಿಗೆ ಕ್ರೀಡೆಗೆ ಏನೇನು ಆಗಬೇಕು ಎನ್ನುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವಂತೆ ಕೇಂದ್ರ ಸಚಿವ ಠಾಕೂರ್ ಸೂಚಿಸಿದರು.
 
ವರ್ಚುವಲ್‍ ಸಭೆಯಲ್ಲಿ ಎಲ್ಲಾ ರಾಜ್ಯದ ಕ್ರೀಡಾ ಸಚಿವರು, ಅಧಿಕಾರಿಗಳು ಹಾಗೂ ವಿಕಾಸ ಸೌಧದಲ್ಲಿ ಸಚಿವರ ಜೊತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕ್ರೀಡಾ ಇಲಾಖೆ ಆಯುಕ್ತ ವೆಂಕಟೇಶ್ ಸೇರಿದಂತೆ  ಇಲಾಖೆ ಅಧಿಕಾರಿಗಳು ಉಪಸ್ಥಿರಿದ್ದರು.
ಚಿಗುರುಗಳು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ