ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

Sampriya

ಬುಧವಾರ, 15 ಅಕ್ಟೋಬರ್ 2025 (21:43 IST)
Photo Credit X
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ  ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಂತಿಮ ಹಂತ ತಲುಪಿದೆ. ಸರ್ಕಾರಿ ಅಧಿಕಾರಿಗಳು ಅಂತಿಮ ಹಂತದ ಸಮೀಕ್ಷೆ ನಡೆಸುತ್ತಿದ್ದಾರೆ.

ಜಾತಿವಾರು ಸಮೀಕ್ಷೆಯಲ್ಲಿ  ಭಾಗವಹಿಸುವುದು ಸ್ವಯಂಪ್ರೇರಿತವೆಂದು ಹಿಂದುಳಿದ ವರ್ಗಗಳ ಆಯೋಗ ಈಗಾಗಲೇ ಸ್ಪಷ್ಟನೆ ನೀಡಿದೆ. ಹೀಗಾಗಿ ಇನ್ಫೋಸಿಸ್​​ ಸಂಸ್ಥಾಪಕ ನಾರಾಯಣ ಮೂರ್ತಿ ಹಾಗೂ ರಾಜ್ಯಸಭಾ ಸದಸ್ಯೆ ಸುಧಾ ನಾರಾಯಣ ಮೂರ್ತಿ ದಂಪತಿ ಸಮೀಕ್ಷೆಯಲ್ಲಿ ಮಾಹಿತಿ ನೀಡಲು ನಿರಾಕರಿಸಿ, ಸ್ವಯಂ ದೃಢೀಕರಣ ನೀಡಿದ್ದಾರೆ.

ಹಿಂದುಳಿದ ವರ್ಗಗಳ ಆಯೋಗಕ್ಕೆ ಈ ಕುರಿತಾಗಿ ನಾರಾಯಣ ಮೂರ್ತಿ ಹಾಗೂ ಸುಧಾ ನಾರಾಯಣ ಮೂರ್ತಿ ಪತ್ರ ಬರೆದಿದ್ದಾರೆ. ಸಮೀಕ್ಷೆಯಲ್ಲಿ ನಮ್ಮ ಕೆಲವು ವೈಯಕ್ತಿಕ ಕಾರಣಗಳಿಂದ ಮಾಹಿತಿ ನೀಡಲು ನಿರಾಕರಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ನಾವು ಹಿಂದುಳಿದ ಯಾವು ಜಾತಿಗೂ ಸೇರುವರಲ್ಲ. ಆದ್ದರಿಂದ ಈ ಸಮೀಕ್ಷೆ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ. ಹಾಗಾಗಿ ನಮ್ಮ ಕುಟುಂಬ ಈ ಸಮೀಕ್ಷೆಯಲ್ಲಿ ಭಾಗವಹಿಸುದಿಲ್ಲ ಮತ್ತು ಮಾಹಿತಿಯನ್ನು ನೀಡಲು ನಿರಾಕರಿಸಿದ್ದೇವೆಎಂದು ಸ್ವಯಂ ದೃಢೀಕರಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ