ಬೆಂಗಳೂರು : ಕರ್ನಾಟಕ ಕುರುಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕಣ ಕಾವೇರಿದ್ದು ಏಪ್ರಿಲ್ 29 ರಿಂದ ಮೇ 7ರವರೆಗೆ ಮೋದಿ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ.
6 ದಿನಗಳಲ್ಲಿ 20ಕ್ಕೂ ಹೆಚ್ಚು ರೋಡ್ ಶೋ, ಸಮಾವೇಶದಲ್ಲಿ ಮೋದಿ ಭಾಗಿಯಾಗಲಿದ್ದಾರೆ. ವಿಶೇಷವಾಗಿ ಬಿಜೆಪಿ ಪ್ರಾಬಲ್ಯ ಕಡಿಮೆ ಇರುವ ಹಳೇ ಮೈಸೂರು ಭಾಗದಲ್ಲಿ ಈ ಬಾರಿ ಮೋದಿ ಸಮಾವೇಶ ಆಯೋಜನೆ ಆಗುತ್ತಿರುವುದು ವಿಶೇಷ.