ನವದೆಹಲಿ -ತಾವು ನೀಡಿರುವ ಗ್ಯಾರೆಂಟಿಗಳ ಭರವಸೆ ಉಳಿಸಿಕೊಳ್ಳಲು ಸಾಧ್ಯವಾಗದ ಪಕ್ಷ ಇಂದು ಬಿಜೆಪಿಯ ಗ್ಯಾರೆಂಟಿ ಬಗ್ಗೆ ಪ್ರಶ್ನಿಸುತ್ತಿದೆ ಎಂದು ಕರ್ನಾಟಕದ ಹೆಸರನ್ನು ಉಲ್ಲೇಖಿಸದೇ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ರೈತರು ಮತ್ತು ಸೈನಿಕರ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಕಾಳಜಿಯಿರಲಿಲ್ಲ. ಬಡವರನ್ನು ಹಾಗೂ ಸೈನಿಕರನ್ನು ಅವಹೇಳನ ಮಾಡಿಕೊಂಡು ಹಲವು ಬಾರಿ ಹೇಳಿಕೆ ನೀಡಲಾಗಿತ್ತು ಎಂದು ಕಾಂಗ್ರೆಸ್ ಪಕ್ಷದ ವಿರುದ್ದ ಕಿಡಿಕಾರಿದರು.
60 ವರ್ಷಗಳ ಕಾಲ ಆಳ್ವಿಕೆ ನಡೆಸಿದ ಕಾಂಗ್ರೆಸ್ ಇಂದು ಹೀನಾಯ ಸ್ಥಿತಿ ತಲುಪಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ವಂದನಾ ನಿರ್ಣಯದ ಬಗ್ಗೆ ರಾಜ್ಯಸಭೆಯಲ್ಲಿ ಬುಧವಾರ ಮಾತನಾಡಿದ ಅವರು, ಕಾಂಗ್ರೆಸಿಗರು ಇಂದು ದೇಶ ವಿಭಜನೆಯ ಹುನ್ನಾರ ಮಾಡುತ್ತಿದ್ದಾರೆ ಎಂದು ಡಿ.ಕೆ .ಸುರೇಶ್ ಅವರ ಹೆಸರು ಪ್ರಸ್ತಾಪಿಸದೇ ಟಾಂಗ್ ನೀಡಿದರು.