ಮಂಗಳೂರಿಗೆ ಆಗಮಿಸಲಿರುವ ನರೇಂದ್ರಮೋದಿ

ಗುರುವಾರ, 1 ಸೆಪ್ಟಂಬರ್ 2022 (21:15 IST)
ನಾಳೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ. ಹೀಗಾಗಿ ಮಂಗಳೂರು ನಗರ ಹೊರವಲಯದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದ್ದು, 25 ಎಕರೆ ಪ್ರದೇಶದಲ್ಲಿ ಬೃಹತ್ ಪೆಂಡಾಲ್ ಅಳವಡಿಸಲಾಗುತ್ತಿದೆ. ನಾಳೆ ಮಧ್ಯಾಹ್ನ 12:55ಕ್ಕೆ ವಿಶೇಷ ವಿಮಾನದ ಮೂಲಕ ಕೊಚ್ಚಿಯಿಂದ ಮಂಗಳೂರು ಏರ್‌ಪೋರ್ಟ್‌ಗೆ ಮೋದಿ ಬಂದಿಳಿಯಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಎನ್.ಎಂ.ಪಿ.ಎ ಹೆಲಿಪ್ಯಾಡ್‍ಗೆ ಬಂದು ಬಳಿಕ ಸಮಾವೇಶ ನಡೆಯುವ ಸ್ಥಳಕ್ಕೆ ಆಗಮಿಸಲಿದ್ದಾರೆ. ಇಂದಿರಾ ಗಾಂಧಿ ಬಳಿಕ 40 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಪ್ರಧಾನಿಯೊಬ್ಬರು ಮಂಗಳೂರಿನಲ್ಲಿ ನಡೆಯುತ್ತಿರುವ ಸರ್ಕಾರಿ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಎನ್‍ಎಂಪಿಟಿ, ಎಂಆರ್‌ಪಿಎಲ್, ರಾಜ್ಯ ಮೀನುಗಾರಿಕೆ ಇಲಾಖೆಯ ಯೋಜನೆಯ ಶಿಲಾನ್ಯಾಸ, ಲೋಕಾರ್ಪಣೆಯನ್ನು ಪ್ರಧಾನಿ ಮಾಡಲಿದ್ದಾರೆ. ಈ ಎಸ್.ಪಿ.ಜಿ ಅಧಿಕಾರಿಗಳು ಮೂರು ದಿನಗಳಿಂದ ಮಂಗಳೂರಿನಲ್ಲೇ ಮೊಕ್ಕಾಂ ಹೂಡಿದ್ದಾರೆ. ಸಮಾವೇಶಕ್ಕೆ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಿಂದ ಕಾರ್ಯಕರ್ತರನ್ನು ಕರೆತರಲು 1461 ಬಸ್, 200 ಟಿಟಿ ಬುಕ್ಕಿಂಗ್ ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ