National Girl Child Day: ಇಂದು ರಾಜ್ಯದಲ್ಲಿ ಜನಿಸುವ ಹೆಣ್ಣು ಮಗುವಿಗೆ ಭರ್ಜರಿ ಗಿಫ್ಟ್

Krishnaveni K

ಶುಕ್ರವಾರ, 24 ಜನವರಿ 2025 (10:03 IST)
ಬೆಂಗಳೂರು: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಹಿನ್ನಲೆಯಲ್ಲಿ ಇಂದು ರಾಜ್ಯದಲ್ಲಿ ಜನಿಸುವ ಹೆಣ್ಣು ಮಗುವಿಗೆ ರಾಜ್ಯ ಸರ್ಕಾರದ ವತಿಯಿಂದ ಭರ್ಜರಿ ಉಡುಗೊರೆ ಸಿಗಲಿದೆ.

ಹೆಣ್ಣು ಭ್ರೂಣ ಹತ್ಯೆ ತಡೆಯುವ ಉದ್ದೇಶದಿಂದ ಮತ್ತು ಲಿಂಗಾನುಪಾತ ಹೆಚ್ಚಿಸುವ ಗುರಿಯೊಂದಿಗೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಆಚರಿಸಲಾಗುತ್ತದೆ. ಗಂಡು-ಹೆಣ್ಣು ಮಗುವಿನ ನಡುವೆ ಅಸಮಾನತೆ ಇರಬಾರದು ಎನ್ನುವುದು ಇದರ ಉದ್ದೇಶ.

ಈ ಹಿನ್ನಲೆಯಲ್ಲಿ ಇಂದು ರಾಜ್ಯದ ಸರ್ಕಾರೀ ಆಸ್ಪತ್ರೆಗಳಲ್ಲಿ ಜನಿಸುವ ಮಕ್ಕಳಿಗೆ ರಾಜ್ಯ ಸರ್ಕಾರದ ವತಿಯಿಂದ 1,000 ರೂ.ಗಳ ಮಕ್ಕಳ ಕಿಟ್ ವಿತರಣೆ ಮಾಡಲಾಗುತ್ತದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ದಿನೇಶ್ ಗುಂಡೂರಾವ್, ಹೆಣ್ಣು ಮಕ್ಕಳ ರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿರುತ್ತದೆ. ಹೆಣ್ಣನ್ನು ಪೂಜ್ಯ ಭಾವನೆಯಿಂದ ನೋಡಬೇಕು. ಭ್ರೂಣ ಲಿಂಗ ಪತ್ತೆ ಮತ್ತು ಗರ್ಭಪಾತ ಮಾಡುವವರ ವಿರುದ್ಧ ಕಠಿಣ ಕ್ರಮವಾಗಬೇಕಿದೆ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ