ಏಪ್ರಿಲ್ 8 ರಿಂದ ರಾಷ್ಟ್ರೀಯ ಸಂಜೀವಿನಿ ಮೇಳ

ಗುರುವಾರ, 7 ಏಪ್ರಿಲ್ 2022 (19:22 IST)
ಮಹಿಳೆಯರ ಆರ್ಥಿಕ ಸಬಲೀಕರಣದ ಆಶಯವನ್ನುಳ್ಳ ರಾಷ್ಟ್ರೀಯ ಸಂಜೀವಿನಿ ಸರಸ್ ಮೇಳವು ಏ.8ರಿಂದ 18ರವರೆಗೆ ಇಲ್ಲಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಮೇಳವನ್ನು ಇದೇ 8ರಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ ಎಂದು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಳದಲ್ಲಿ ಮಹಿಳಾ ಸ್ವಸಹಾಯ ಸಂಘಗಳು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಇರಲಿದ್ದು, 300ಕ್ಕೂ ಹೆಚ್ಚು ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ