ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಬಿಡುಗಡೆಗೆ ಕ್ಷಣಗಣನೆ ಎಂದಿದ್ದ ನವೀನ್‌ ಗೌಡ ಅರೆಸ್ಟ್‌

sampriya

ಮಂಗಳವಾರ, 28 ಮೇ 2024 (17:58 IST)
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋವನ್ನು ವೈರಲ್‌ ಮಾಡಿದ ಪ್ರಕರಣದಲ್ಲಿ ಇಬ್ಬರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಇಂದು(ಮೇ 28) ಹೈಕೋರ್ಟ್​​ಗೆ ಬಂದಿದ್ದ ಆರೋಪಿಗಳಾದ ನವೀನ್ ಗೌಡ, ಚೇತನ್​ನನ್ನು ಎಸ್​ಐಟಿ ಬಂಧಿಸಿದೆ.

ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋ ಬಿಡುಗಡೆಗೆ ಕ್ಷಣಗಣನೆ ಎಂದು ನವೀನ್‌ ಗೌಡ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದ. ಈ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿ, ಚರ್ಚೆಗೆ ಕಾರಣವಾಗಿತ್ತು. ಈ ಸಂಬಂಧ ಜೆಡಿಎಸ್‌ ಪೋಸ್ಟ್ ಅನ್ನು ಸ್ಕ್ರೀನ್ ಶಾಟ್ ತೆಗೆದು ಪೊಲೀಸರಿಗೆ ದೂರು ನೀಡಿತ್ತು.

ಪ್ರಕರಣ ದಾಖಲಾದ ಬೆನ್ನಲ್ಲೇ ನವೀನ್‌ ಗೌಡ ತನ್ನ ಪೇಸ್‌ಬುಕ್‌ನಿಂದ ಆ ಪೋಸ್ಟ್‌ ಅನ್ನು ಡಿಲೀಟ್‌ ಮಾಡಿದ್ದ. ಅದಲ್ಲದೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿತ್ತು. ಆದರೆ ನವೀನ್‌ ಗೌಡ ವಿಚಾರಣೆಗೆ ಹಾಜರಾಗದ ತಲೆಮರೆಸಿಕೊಂಡಿದ್ದ. ಇನ್ನೂ ನವೀನ್‌ ಗೌಡ ಬಂಧಿಸಿಲ್ಲವೆಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಿಡಿಸಿದ್ದರು.

ಇನ್ನೂ ಎಸ್‌ಐಟಿ ವಶದಲ್ಲಿರುವ ನವೀನ್‌ ಗೌಡ ಅವರು ಕಾಂಗ್ರೆಸ್‌ನ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ