ನವದೆಹಲಿ: ಮುಂದಿನ ಎರಡು ವರ್ಷಗಳಲ್ಲಿ ದೇಶದಲ್ಲಿರುವ ನಕ್ಸಲ್ ಸಮಸ್ಯೆಯನ್ನು ನಿರ್ಮೂಲನೆ ಮಾಡುತ್ತೇವೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ಅವರು ಎಎನ್‌ಎ ಜತೆ ಶನಿವಾರ ಮಾತನಾಡಿ, ಪ್ರಸ್ತುತ ಛತ್ತೀಸಗಢ ರಾಜ್ಯದ ಒಂದು ಸಣ್ಣ ಪ್ರದೇಶವನ್ನು ಹೊರತುಪಡಿಸಿದರೆ ದೇಶದಲ್ಲಿ ನಕ್ಸಲ್ ಪಿಡುಗು ಇಲ್ಲ, ಎರಡು ಮೂರು ವರ್ಷಗಳಲ್ಲಿ ಈ ಸಮಸ್ಯೆ ಸಂಪೂರ್ಣವಾಗಿ ಕೊನೆಗೊಳ್ಳುತ್ತದೆ ಎಂದು ಹೇಳಿದರು.
ಸದ್ಯ ಜಾರ್ಖಂಡ್ ನಕ್ಸಲ್‌ನಿಂದ ಸಂಪೂರ್ಣವಾಗಿ ಮುಕ್ತವಾಗಿದ್ದು, ಹಾಗೆಯೇ ಬಿಹಾರ, ಒಡಿಶಾ, ತೆಲಂಗಾಣ ಮತ್ತು ಆಂಧ್ರಪ್ರದೇಶಗಳಲ್ಲಿ ಸಹ ಮುಕ್ತವಾಗಲಿದೆ. ಇದೀಗ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯಗಳು ಸಹ ನಕ್ಸಲ್‌ನಿಂದ ಮುಕ್ತಿಪಡೆದಿವೆ ಎಂದು ಹೇಳಿದರು.
ಐದು ತಿಂಗಳ ಹಿಂದೆ ಛತ್ತೀಸಗಢದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ, ರಾಜ್ಯವನ್ನು ನಕ್ಸಲ್‌ನಿಂದ ಮುಕ್ತಗೊಳಿಸುವ ಕೆಲಸ ಆರಂಭವಾಗಿದೆ ಎಂದು ಹೇಳಿದರು.