ಉಡುಪಿ: ನಿನ್ನೆಯಷ್ಟೇ ಉಡುಪಿಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಮೃತಪಟ್ಟ ನಕ್ಸಲ್ ನಾಯಕ ವಿಕ್ರಂ ಗೌಡ ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದ್ದು ಇಂದು ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗುತ್ತಿದೆ.
ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ತಹಶೀಲ್ದಾರ್ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಇಂದು ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗುತ್ತದೆ. ಇಂದು ಕುಟುಂಬಸ್ಥರು ಅಂತ್ಯ ಸಂಸ್ಕಾರ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ 21 ವರ್ಷಗಳಿಂದ ಕುಟುಂಬಸ್ಥರೊಂದಿಗೆ ವಿಕ್ರಂ ಗೌಡ ಸಂಪರ್ಕದಲ್ಲಿಲ್ಲ. ಆದರೆ ಈಗ ಪೊಲೀಸರು ಆತನ ಸಹೋದರನನ್ನು ಸಂಪರ್ಕಿಸಿದ್ದು ಮೃತದೇಹ ಹಸ್ತಾಂತರಿಸಲಿದ್ದಾರೆ. ಆರಂಭದಲ್ಲಿ ಶವ ಪಡೆಯಲು ಕುಟುಂಬಸ್ಥರು ಹಿಂದೇಟು ಹಾಕಿದ್ದಾರೆ. ಬಳಿಕ ಪೊಲೀಸರು ಮನವೊಲಿಸಿದರು.
ಸಹೋದರ ಜಯಂತ ಗೌಡ ಮನೆಗೆ ದಿನಸಿ ಸಾಮಗ್ರಿ ಪಡೆಯಲು ಬಂದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಮೊದಲು ಪೊಲೀಸರ ಮೇಲೆ ಆತ ಗುಂಡು ಹಾರಿಸಲು ಮುಂದಾಗಿದ್ದಾನೆ. ಇದರಿಂದಾಗಿ ಆತನ ಮೇಲೆ ಪೊಲೀಸರು ಮೂರು ಸುತ್ತಿನ ಗುಂಡು ಹಾರಿಸಿದ್ದು ಜಯಂತ್ ಗೌಡ ಮನೆಯ ಹೊಸ್ತಿಲಲ್ಲೇ ಪ್ರಾಣ ಬಿಟ್ಟಿದ್ದಾನೆ.