ಕೃಷಿ ಇಲಾಖೆಯಲ್ಲಿ 58% ರಷ್ಟು ಹುದ್ದೆಗಳು ಖಾಲಿಯಿದ್ದು, ಯೋಜನೆಗಳನ್ನು ಪರಿಣಾಮಕಾರಿಯಾಗಿ ರೈತರಿಗೆ ತಲುಪಿಸಲು ವಿಳಂಬ ಆಗಲಿದೆ.
ಆ ನಿಟ್ಟಿನಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ಅವಶ್ಯವಿದೆ. ಹಾಗಾಗಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಕೃಷಿ ಇಲಾಖೆಗೆ ಒಟ್ಟು 8,982 ಹುದ್ದೆಗಳು ಮಂಜೂರಾಗಿದ್ದು, ಆ ಪೈಕಿ 3,787 ಹುದ್ದೆಗಳು ಭರ್ತಿಯಾಗಿವೆ. 5,195 ಹುದ್ದೆಗಳು ಖಾಲಿ ಇರುತ್ತವೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಇಲಾಖೆಯ ಕಾರ್ಯದರ್ಶಿ ಶಿವಯೋಗಿ ಕಳಸದ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.