ಕನ್ನಡ ಭಾಷೆಯಲ್ಲಿ ನೀಟ್ ಪರೀಕ್ಷೆ ಕೋರಿ ಕೇಂದ್ರಕ್ಕೆ ಮನವಿ: ಸಚಿವ ಪಾಟೀಲ್

ಶುಕ್ರವಾರ, 23 ಡಿಸೆಂಬರ್ 2016 (10:27 IST)
ನೀಟ್ ಪರೀಕ್ಷೆಯನ್ನು ಕನ್ನಡ ಭಾಷೆಯಲ್ಲಿಯೂ ನಡೆಸುವಂತೆ ಕೋರಿ ಕೇಂದ್ರ ಸರಕಾರಕ್ಕೆ ಪತ್ರ ಬರೆಯಲಾಗಿದೆ. ಕನ್ನಡ ಭಾಷೆ ಶಾಸ್ತ್ರೀಯ ಸ್ಥಾನಮಾನ ಹೊಂದಿದ್ದು, ಕೇಂದ್ರ ಸರಕಾರ ಪ್ರಾಂತೀಯ ಭಾವನೆಗಳನ್ನು ಅರ್ಥಮಾಡಿಕೊಳ್ಳಬೇಕು ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಒತ್ತಾಯಿಸಿದರು
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ ಆರು ಸರಕಾರಿ ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸಿದ್ದು, ಇನ್ನೊಂದು ಕಾಲೇಜು ಪ್ರಾರಂಭಿಸುವ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಅಲ್ಲದೆ ಇನ್ನೂ 6 ವೈದ್ಯಕೀಯ ಕಾಲೇಜು ಪ್ರಾರಂಭಿಸುವ ಪ್ರಸ್ತಾವನೆ ರಾಜ್ಯ ಸರಕಾರದ ಮುಂದಿದೆ ಎಂದು ಸ್ಪಷ್ಟಪಡಿಸಿದರು. 
 
ತೊಗರಿ ಖರೀದಿ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯುವ ಕುರಿತು ನಿಗಾವಹಿಸುವಂತೆ ಹಾಗೂ ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ನಿಟ್ಟಿನಲ್ಲಿ ರೈತರು ಯಾವುದೇ ಆತಂಕಪಡಪವ ಅಗತ್ಯ ಇಲ್ಲ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಭರವಸೆ ನೀಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ