ತಾಯಿ, ಮಗಳು ಬಟ್ಟೆ ಬದಲಾಯಿಸುತ್ತಿದ್ದಾಗ ಇಂತಹ ಕೆಲಸ ಮಾಡುತ್ತಿದ್ದ ಪಕ್ಕದ್ಮನೆಯಾತ

ಬುಧವಾರ, 21 ಏಪ್ರಿಲ್ 2021 (07:23 IST)
ಬೆಂಗಳೂರು : ಯುವತಿ ಹಾಗೂ ಆಕೆಯ ತಾಯಿಗೆ ಪಕ್ಕದಮನೆಯಾತ ಲೈಂಗಿಕ ಕಿರುಕುಳ ನೀಡುತ್ತಿದ್ದ ಘಟನೆ ಉತ್ತರ ಬೆಂಗಳೂರಿನಲ್ಲಿ ನಡೆದಿದೆ.

ಸಂತ್ರಸ್ತೆ ಖಾಸಗಿ ಕಂಪೆನಿಯ ಉದ್ಯೋಗಿಯಾಗಿದ್ದು, ತಾಯಿಯ ಜೊತೆ ವಾಸಿಸುತ್ತಿದ್ದಳು. ಅವರ ಮನೆಗೆ ಪಕ್ಕದ ಮನೆಯಲ್ಲಿದ್ದ ಆರೋಪಿ ಆಗಾಗ ಭೇಟಿ ನೀಡುತ್ತಿದ್ದ. ಅಲ್ಲದೇ  ತಾಯಿ, ಮಗಳು, ಬಟ್ಟೆ ಬದಲಾಯಿಸುವಾಗ ಕದ್ದು ನೋಡುತ್ತಿದ್ದ. ಅಷ್ಟೇ ಅಲ್ಲದೇ ಅವರಿಗೆ ತನ್ನ ಜೊತೆ ಲೈಂಗಿಕ ಸಂಬಂಧ ಹೊಂದುವಂತೆ ಹಾಗೂ ಅದಕ್ಕಾಗಿ ಹಣ ನೀಡುವುದಾಗಿ ಹೇಳಿದ್ದಾನೆ.

ಇದರಿಂದ ಕೋಪಗೊಂಡ ತಾಯಿ- ಮಗಳು ಆತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ತಿಳಿದ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ