ನೇಹಾ ಹತ್ಯೆ ತನಿಖೆ ಚುರುಕು: ಫಯಾಜ್‌ನನ್ನು ಹುಬ್ಬಳ್ಳಿಗೆ ಕರೆದೊಯ್ದ ಸಿಐಡಿ ಅಧಿಕಾರಿಗಳು

Sampriya

ಬುಧವಾರ, 24 ಏಪ್ರಿಲ್ 2024 (15:23 IST)
Photo Courtesy X
ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಹತ್ಯೆಯಾದ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣದ ಆರೋಪಿ ಫಯಾಜ್‌ನನ್ನು ಧಾರವಾಡದ ಕಾರಾಗೃಹದಿಂದ ಸಿಐಡಿ ಪೊಲೀಸರು ಹುಬ್ಬಳ್ಳಿಗೆ ಬುಧವಾರ ಕರೆದೊಯ್ದರು.

ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ನೇಹಾ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರ ಮಾಡಿದೆ. ತನಿಖೆ ಚುರುಕುಗೊಳಿಸಿದ ಅಧಿಕಾರಿಗಳು  ಹೆಚ್ಚಿನ ಮಾಹಿತಿ ಸಂಗ್ರಹಕ್ಕೆ ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಇಲ್ಲಿನ ಒಂದನೇ ಜೆಎಂಎಫ್‌ಸಿ ಕೋರ್ಟ್‌ಗೆ ಸಿಐಡಿ ಅರ್ಜಿ ಸಲ್ಲಿಸಿತ್ತು. ಅರ್ಜಿ‌ ಪುರಸ್ಕರಿಸಿದ ನ್ಯಾಯಾಲಯ, ಆರೋಪಿಯನ್ನು 6 ದಿನಗಳ ಕಾಲ ಸಿಐಡಿ ವಶಕ್ಕೆ ಒಪ್ಪಿಸಿದೆ.

ಇದರ ಬೆನ್ನಲ್ಲೇ ಧಾರವಾಡ ಕಾರಾಗೃಹದಲ್ಲಿರುವ ಫಯಾಜ್‌ನನ್ನು ಸಿಐಡಿ ಎಸ್‌ಪಿ ವೆಂಕಟೇಶ್ ನೇತೃತ್ವದ ತಂಡ ಬುಧವಾರ ಘಟನಾ ಸ್ಥಳವಾದ ಹುಬ್ಬಳ್ಳಿಗೆ ಕರೆದೊಯ್ದಿದೆ.
ಈ ವೇಳೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ