ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್ ಟಿಯಲ್ಲಿ ಬದಲಾವಣೆ ತರಲು ಹೊರಟಾಗ ಇಂಡಿಯಾ ಒಕ್ಕೂಟದ ರಾಜ್ಯಗಳು ಇದನ್ನು ವಿರೋಧಿಸಿದ್ದವು. ಅದರಲ್ಲಿ ಸಿಎಂ ಸಿದ್ದರಾಮಯ್ಯ ಕೂಡಾ ಒಬ್ಬರು. ಆದರೆ ಈಗ ಕೇಂದ್ರ ಜಿಎಸ್ ಟಿ ಕಡಿತ ಮಾಡಿದ್ದನ್ನು ಸ್ವಾಗತಿಸಿದ್ದಾರೆ. ಇದೇ ಕಾರಣಕ್ಕೆ ನೆಟ್ಟಿಗರು ಅವರನ್ನು ಪ್ರಶ್ನೆ ಮಾಡಿದ್ದಾರೆ.
ಕೇಂದ್ರ ಸರ್ಕಾರ ಜಿಎಸ್ ಟಿ ಬದಲಾವಣೆ ಮಾಡಲು ಹೊರಟಾಗ ಇಂಡಿಯಾ ಒಕ್ಕೂಟದ ಪಕ್ಷಗಳು ಆಡಳಿತವಿರುವ ರಾಜ್ಯಗಳ ನಾಯಕರು ದೆಹಲಿಯಲ್ಲಿ ಸಭೆ ಸೇರಿ ಕೇಂದ್ರದ ನಡೆಯನ್ನು ವಿರೋಧಿಸಿದ್ದವು. ಇದರಿಂದ ರಾಜ್ಯಕ್ಕೆ ಆದಾಯ ಕಡಿತವಾಗುತ್ತದೆ. ಲಕ್ಷ ಕೋಟಿ ನಷ್ಟವಾಗುತ್ತದೆ ಎಂದು ವಿರೋಧ ವ್ಯಕ್ತಪಡಿಸಿದ್ದವು.
ಸಿಎಂ ಸಿದ್ದರಾಮಯ್ಯ ಕೂಡಾ ರಾಜ್ಯಕ್ಕೆ ಆಗುವ ನಷ್ಟವನ್ನು ಕೇಂದ್ರವೇ ಭರಿಸಲಿ ಎಂದು ಕೇಳಿದ್ದರು. ಆದರೆ ಈಗ ಕೇಂದ್ರ ಸರ್ಕಾರ ಜಿಎಸ್ ಟಿ ಕಡಿತ ಮಾಡಿದ ಒಂದು ದಿನದ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಕೇಂದ್ರ ನಿರ್ಧಾರವನ್ನು ಸ್ವಾಗತಿಸುತ್ತೇವೆ ಎಂದಿದ್ದಾರೆ.
ಆದರೆ ಇದಕ್ಕೆ ನೆಟ್ಟಿಗರು ಪ್ರತಿಕ್ರಿಯಿಸಿದ್ದು ಮತ್ತೆ ಮೊನ್ನೆ ಮೊನ್ನೆ ವಿರೋಧಿಸಿದ್ದು ಯಾಕೆ? ನಿಜವಾಗಿಯೂ ಈ ವಿಚಾರದಲ್ಲಿ ನಿಮ್ಮ ನಿಲುವೇನು ಎಂದು ಕೇಳಿದ್ದಾರೆ. ಇನ್ನು ಕೆಲವರು ಕೇಂದ್ರ ಸರ್ಕಾರದಂತೆ ನೀವೂ ಕರ್ನಾಟಕದಲ್ಲಿ ಬೆಲೆ ಇಳಿಕೆಗೆ ಕ್ರಮ ಕೈಗೊಳ್ಳಿ ಎಂದು ಸಲಹೆ ನೀಡಿದ್ದಾರೆ.