ಬಸ್ ಮುಷ್ಕರ: ಕೋಡಿಹಳ್ಳಿ ಚಂದ್ರಶೇಖರ್ ಗೆ ಜನರ ಹಿಡಿಶಾಪ

ಬುಧವಾರ, 7 ಏಪ್ರಿಲ್ 2021 (10:17 IST)
ಬೆಂಗಳೂರು: ಸಾರಿಗೆ ನೌಕರರ ಬಸ್ ಮುಷ್ಕರಕ್ಕೆ ನೇತೃತ್ವ ವಹಿಸಿರುವ ಕೋಡಿ ಹಳ್ಳಿ ಚಂದ್ರಶೇಖರ್ ಗೆ ನೆಟ್ಟಿಗರು ಹಿಡಿಶಾಪ ಹಾಕಿದ್ದಾರೆ.

 

ರೈತ ನಾಯಕನೆನೆಸಿಕೊಂಡಿರುವ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ನೌಕರರ ಮುಷ್ಕರಕ್ಕೆ ಕುಮ್ಮಕ್ಕು ಕೊಡುತ್ತಿದ್ದಾರೆ. ಅವರ ಬೇಳೆ ಬೇಯಿಸಿಕೊಳ್ಳಲು ಜನಸಾಮಾನ್ಯರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಕಿಡಿ ಕಾರಿದ್ದಾರೆ.

ನಿಮ್ಮ ಸ್ವಾರ್ಥಕ್ಕೋಸ್ಕರ ಸಾರಿಗೆ ನೌಕರರನ್ನು ಎತ್ತಿಕಟ್ಟಿ ಜನಸಾಮಾನ್ಯರಿಗೆ ತೊಂದರೆ ಕೊಡಬೇಡಿ. ನಿಜವಾದ ರೈತ ನಾಯಕನಾದರೆ ರೈತನಂತೆ ಹೊಲದಲ್ಲಿ ದುಡಿದು ತೋರಿಸಿ ಎಂದು ಕೆಲವರು ಕಿಡಿಕಾರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ