ಬೆಂಗಳೂರು: ಮುಡಾ ಹಗರಣದಲ್ಲಿ ತಮ್ಮ ಹಾಗೂ ಪತ್ನಿ ವಿರುದ್ಧದ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡುತ್ತಿದ್ದಂತೇ ಸಿಎಂ ಸಿದ್ದರಾಮಯ್ಯ ಖುಷಿಯಿಂದ ಟ್ವೀಟ್ ಮಾಡಿದ್ದರು. ಇದಕ್ಕೆ ನೆಟ್ಟಿಗರು ಪ್ರತಿಕ್ರಿಯಿಸಿದ್ದು ಹಾಗಿದ್ದರೆ ಸೈಟ್ ವಾಪಸ್ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ವಿರುದ್ಧದ ವಿಚಾರಣೆಗೆ ಇಡಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. ಆದರೆ ಸುಪ್ರೀಂಕೋರ್ಟ್ ಅರ್ಜಿ ತಿರಸ್ಕರಿಸಿದ್ದು, ಇಡಿಗೆ ತಪರಾಕಿ ನೀಡಿತ್ತು. ಸುಪ್ರೀಂ ತೀರ್ಪಿನಿಂದ ಖುಷಿಯಾದ ಸಿದ್ದರಾಮಯ್ಯ ಟ್ವೀಟ್ ಮಾಡಿ ಇದು ಬಿಜೆಪಿ ಮತ್ತು ಕೇಂದ್ರ ಸರ್ಕಾರಕ್ಕೆ ಕಪಾಳ ಮೋಕ್ಷ. ನನ್ನ ಮೇಲೆ ಇಲ್ಲದ ಕೇಸ್ ಹಾಕಿ ಇಡಿ ಸಂಸ್ಥೆಯನ್ನು ದುರ್ಬಳಕೆ ಮಾಡಲು ಯತ್ನಿಸಿದ ಕೇಂದ್ರಕ್ಕೆ ಕಪಾಳ ಮೋಕ್ಷ ಮಾಡಿದಂತಾಗಿದೆ ಎಂದು ಖುಷಿ ಹಂಚಿಕೊಂಡಿದ್ದರು.
ಇದಕ್ಕೆ ನೆಟ್ಟಿಗರು ಪ್ರತಿಕ್ರಿಯಿಸಿದ್ದು ಹಾಗಿದ್ದರೆ ಹಗರಣ ಆರೋಪ ಕೇಳಿ ಬಂದ ಬೆನ್ನಲ್ಲೇ 14 ಸೈಟುಗಳನ್ನು ವಾಪಸ್ ಮಾಡಿದ್ದೇಕೆ? ಬಳಿಕ 14 ಸೈಟುಗಳಿಗೆ ಪರಿಹಾರವಾಗಿ 63 ಕೋಟಿ ಕೊಡಬೇಕು ಎಂದಿದ್ದೇಕೆ ಎಂದು ಪ್ರಶ್ನೆ ಮಾಡಿದ್ದಾರೆ. ಹಾಗಿದ್ದರೆ ವಾಪಸ್ ಮಾಡಿದ್ರೆ ಎಲ್ಲಾ ತಪ್ಪುಗಳೂ ಮಾಫಿಯಾದ ಹಾಗಾ ಎಂದು ವ್ಯಂಗ್ಯ ಮಾಡಿದ್ದಾರೆ. ಇನ್ನು ಕೆಲವರು ಸಿದ್ದರಾಮಯ್ಯಗೆ ಜೈ ಎಂದಿದ್ದಾರೆ. ಬಿಜೆಪಿ ಮತ್ತು ಕೇಂದ್ರ ಸರ್ಕಾರಕ್ಕೆ ಸರಿಯಾಗಿಯೇ ಶಾಸ್ತಿಯಾಗಿದೆ ಎಂದಿದ್ದಾರೆ.