ಎಪಿಎಲ್ ಬಿಪಿಎಲ್ ಪಡಿತರ ಚೀಟಿಗಾಗಿ ಹೊಸ ಅರ್ಜಿ ಆಹ್ವಾನ

geetha

ಗುರುವಾರ, 7 ಮಾರ್ಚ್ 2024 (18:30 IST)
ಬೆಂಗಳೂರು-ಗ್ರಾಮೀಣ ಪ್ರದೇಶದಲ್ಲಿ ಕುಟುಂಬದ ಆದಾಯ1.20 ಲಕ್ಷ ರೂಪಾಯಿಗಿಂತ ಹೆಚ್ಚಿದ್ದರೆ ಅಂತಹವರನ್ನು ಬಿಪಿಎಲ್ ಚೀಟಿಯಿಂದ ಹೊರಗಿಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.ಎಪಿಎಲ್, ಬಿಪಿಎಲ್ ಪಡಿತರ ಚೀಟಿಗಳಿಗಾಗಿ ಹೊಸ ಅರ್ಜಿಗಳನ್ನು ಏಪ್ರಿಲ್ 1 ರಿಂದ ಸ್ವೀಕರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ವಿಧಾನಸಭೆಗೆ ತಿಳಿಸಿದ್ದಾರೆ.
 
ಇನ್ನೂ ಇತ್ತಾ ಗುರುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಅನ್ನಭಾಗ್ಯ ದಶಮಾನೋತ್ಸವ ಹಸಿವು ಮುಕ್ತ ಕರ್ನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪಡಿತರ ವಿತರಕರಿಗೆ ಪ್ರತಿ ಕೆ.ಜಿ. ಅಕ್ಕಿಗೆ ಕಮಿಷನ್ ಮೊತ್ತ ಒಂದೂವರೆ ರೂಪಾಯಿ ಹೆಚ್ಚಳಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
 
ಸರ್ಕಾರದ ಗ್ಯಾರಂಟಿ ಯೋಜನೆಗಳ ಉದ್ದೇಶ ರಾಜ್ಯವನ್ನು ಹಸಿವು, ಅನಾರೋಗ್ಯ, ಅನಕ್ಷರತೆ, ನಿರುದ್ಯೋಗ ಮುಕ್ತ ಮಾಡುವುದೇ ಆಗಿದೆ. ಸರ್ಕಾರದ ಯೋಜನೆಗಳಿಂದ ಸಂಪತ್ತು, ಅಧಿಕಾರ ಮತ್ತು ಅವಕಾಶಗಳ ಸಮಾನ ಹಂಚಿಕೆಯಾಗಬೇಕು ಎಂದರು.
 
ಬಸವಣ್ಣನವರ ಕಾಯಕ ದಾಸೋಹದ ಪರಿಕಲ್ಪನೆ ಅನ್ನಭಾಗ್ಯಕ್ಕೆ ಪ್ರೇರಣೆಯಾಗಿತ್ತು. ಆಹಾರ ಉತ್ಪಾದನೆ ಮಾಡುವವರು ಕಾಯಕ ಜೀವಿಗಳು ಹಸಿವಿನಿಂದ ಮಲಗಬಾರದು. 5 ಕೆ.ಜಿ. ಅಕ್ಕಿಗೆ ಬದಲಾಗಿ ಪ್ರತಿ ಕೆ.ಜಿ.ಗೆ 34 ರೂಪಾಯಿಯಂತೆ ಫಲಾನುಭವಿಗಳಿಗೆ ನೇರ ನಗದು ಮೂಲಕ ಹಣ ವರ್ಗಾವಣೆ ಮಾಡಲಾಗುತ್ತಿದೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ