ಹೊಸ ಬಾಂಬ್ ಸಿಡಿಸಿದ ಯಡಿಯೂರಪ್ಪ?
ಶೀಘ್ರದಲ್ಲಿಯೇ ರಾಜ್ಯದ ಸಮ್ಮಿಶ್ರ ಸರಕಾರ ಪತನಗೊಳ್ಳಲಿದೆ. ಸರಕಾರ ಉರುಳಿಸುವ ಯತ್ನ ಬಿಜೆಪಿ ಮಾಡಲ್ಲ. ಆದರೆ ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಎಸ್ ವೈ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯದ ಸಮ್ಮಿಶ್ರ ಸರಕಾರ ಬೀಳಿಸುವ ಯತ್ನವನ್ನು ಬಿಜೆಪಿ ಮಾಡುವುದಿಲ್ಲ. ಆದರೆ ಕಾಂಗ್ರೆಸ್ ನ ನಾಯಕರು ಬಿಜೆಪಿಗೆ ಬರುವುದು ಪಕ್ಕಾ ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ಧಗೊಳ್ಳುತ್ತಿದೆ. ಈಗಾಗಲೇ ಚುನಾವಣೆ ಸಿದ್ಧತೆಗಳು ಆರಂಭಗೊಂಡಿವೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.