ಬಸ್ ದರ ಏರಿಕೆಗೆ ಹೊಸ ಆಯೋಗ, ಇದು ಪಿಕ್ ಪಾಕೆಟ್ ಸರ್ಕಾರದ ಹೊಸ ಪ್ರಯೋಗ ಎಂದ ಆರ್‌ ಅಶೋಕ್

Sampriya

ಶುಕ್ರವಾರ, 23 ಆಗಸ್ಟ್ 2024 (15:00 IST)
ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ನಿರ್ಧರಿಸುವ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಮಾದರಿಯಲ್ಲೇ ಸಾರಿಗೆ ನಿಗಮಗಳ ಪ್ರಯಾಣ ದರ ಏರಿಕೆಗೆ ಪ್ರತ್ಯೇಕ ನಿಯಂತ್ರಣ ಆಯೋಗ ರಚನೆಗೆ ಸರ್ಕಾರ ಮುಂದಾಗುತ್ತಿರುವ ಬಗ್ಗೆ ವಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು,  ಅಧಿಕಾರಕ್ಕೆ ಬಂದ ದಿನದಿಂದ ಬೆಲೆ ಏರಿಕೆ, ತೆರಿಗೆ ಹೆಚ್ಚಳ ಅಂತ ಒಂದಲ್ಲ ಒಂದು ರೀತಿ ಜನ ಸಾಮಾನ್ಯರ ಸುಲಿಗೆ ಮಾಡುತ್ತಿರುವ ಕರ್ನಾಟಕ ಸರ್ಕಾರ ಈಗ ಬಸ್ ದರ ಏರಿಕೆಗೆ ಪ್ರತ್ಯೇಕ ಆಯೋಗ ರಚಿಸಿ ಪಿಕ್ ಪಾಕೆಟ್ ಗಾಗಿ ಹೊಸ ಪ್ರಯೋಗ ಮಾಡಲು ಹೊರಟಿದೆ.

ಆಡಳಿತ ಮಾಡುವಲ್ಲಿ ಮೂರು ಕಾಸು ಪ್ರಯೋಜನ ಇಲ್ಲದಿದ್ದರೂ ಜನರಿಗೆ ಮಂಕು ಬೂದು ಎರಚಿ ಹೊಸ ಪ್ರಯೋಗಗಳ ಮೂಲಕ ಜನರನ್ನ ಸುಲಿಗೆ ಮಾಡುವಲ್ಲಿ ಕಾಂಗ್ರೆಸ್ ಪಕ್ಷದವರು ಬಹಳ ನಿಸ್ಸೀಮರು ಎಂದು ಬರೆದುಕೊಂಡಿದ್ದಾರೆ.

ಗ್ಯಾರಂಟಿ ಯೋಜನಗೆಳಿಂದಾಗಿ ಕಾಂಗ್ರೆಸ್ ಸರ್ಕಾರ ನಷ್ಟದ ಹಾದಿಯಲ್ಲಿದೆ, ಅದನ್ನು ಭರಿಸುವ ಸಲುವಾಗಿ ಇದೀಗ ಬಸ್‌ ದರ ಏರಿಕೆಗೆ ಹೊಸ ಆಯೋಗ ರಚನೆ ಮಾಡಲು ನಿರ್ಧರಿಸಿದೆ ಎಂದು ವಿಪಕ್ಷಗಳು ಟೀಕೆ ಮಾಡುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ