2022-23 ನೇ ಸಾಲಿನ ರಾಜ್ಯ ಬಜೆಟ್ ಕುರಿತು ವಿಧಾನಸೌಧದಲ್ಲಿಂದು ನಡೆದ ಇಲಾಖಾವಾರು ಆಯವ್ಯಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಬಕಾರಿ ಉದ್ಯಮ ವ್ಯಾಪ್ತಿ ಹೆಚ್ಚಿಸಿಕೊಂಡಿದೆ. ಯಾವುದೆ ಉದ್ಯಮ ವ್ಯಾಪ್ತಿ ಹೆಚ್ಚಿಸಿಕೊಂಡಾಗ ಬದಲಾವಣೆ ಆಗಲು ಸಮಯ ಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಕಾಲ ಕಾಲಕ್ಕೆ ವಿಚಾರಣೆ ಮಾಡಿ ಸರಿಪಡಿಸುವುದು ಎಲ್ಲರ ಕೆಲಸ ಎಂದರು.
ಸಿಎಲ್ 7, ಸಿಎಲ್ 9 ವಿಚಾರದಲ್ಲಿ ಸಾಕಷ್ಟು ದೂರುಗಳು ಬಂದಿವೆ.ಇದೆಲ್ಲವನ್ನೂ ಸರಿಪಡಿಸುವ ಕೆಲಸ ಆಗಬೇಕು. ವ್ಯಾಪಾರ, ಆದಾಯ ಮೂರು ಮುಖ್ಯ ಅಂಶಗಳನ್ನು ಇಟ್ಟುಕೊಂಡು ಕೆಲಸಮಾಡುವಂತೆ ಸೂಚಿಸಿದರಲ್ಲದೇ ಸಮಯ ನೀಡಿದರೆ ಇಲಾಖೆಯಲ್ಲಿ ಆಮೂಲಾಗ್ರ ಬದಲಾವಣೆ ತರುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು ಎಂದರು.